logo
WhatsApp Image 2026-04-02 at 14.46.04.jpeg
hindalco everlast.jpeg

ಉರ್ವ ಠಾಣೆ ಹೆಡ್ ಕಾನ್ ಸ್ಟೇಬಲ್ ಸಿದ್ಧಾರ್ಥ್ ಹೃದಯಾಘಾತಕ್ಕೆ ಬಲಿ

ಟ್ರೆಂಡಿಂಗ್
share whatsappshare facebookshare telegram
2 Oct 2021
post image

ಮಂಗಳೂರು: ನಗರದ ಉರ್ವ ಠಾಣೆಯಲ್ಲಿ ಹೆಡ್ ಕಾನ್ ಸ್ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಸಿದ್ದಾರ್ಥ್ ಜೆ. (41) ಶನಿವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಪುತ್ತೂರಿನ ಈಶ್ವರಮಂಗಲದವರಾದ ಸಿದ್ದಾರ್ಥ್ ಶುಕ್ರವಾರ ರಾತ್ರಿ ಕರ್ತವ್ಯದಲ್ಲಿದ್ದ ವೇಳೆ ಆರೋಗ್ಯದಲ್ಲಿ ಸಮಸ್ಯೆ ಕಂಡು ಬಂತು. ಸಹೋದ್ಯೋಗಿಗಳು ಅವರನ್ನು ಮನೆಗೆ ಹೋಗಲು ತಿಳಿಸಿದರು. ನಂತರ ಸಿದ್ದಾರ್ಥ್ ಅವರು ಮನೆಗೆ ತೆರಳಿದರು. ಆದರೆ ಶನಿವಾರ ಮುಂಜಾನೆ 3 ಗಂಟೆಯ ವೇಳೆಗೆ ಅವರಿಗೆ ಎದೆನೋವು ಕಾಣಿಸಿಕೊಂಡಿತು. ತಕ್ಷಣ ಅವರನ್ನು ಕಂಕನಾಡಿಯ ಫಾದರ್ ಮುಲ್ಲರ್ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟರು ಎಂದು ತಿಳಿದು ಬಂದಿದೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.