



ಬೆಂಗಳೂರು : ಮೀಸಲಾತಿ ಯನ್ನು 4ರಿಂದ ಶೇ 8ಕ್ಕೆ ಹೆಚ್ಚಿಸಲು ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ಕರ್ನಾಟಕ ಮುಸ್ಲಿಂ ಯುನಿಟಿ ಸಂಘಟನೆ ಸರಕಾರವನ್ನು ಒತ್ತಾಯಿಸಿದೆ.
'ರಾಜ್ಯ ಸರ್ಕಾರ ಹಿಂದೆ ನೇಮಿಸಿದ ಹಿಂದುಳಿದ ವರ್ಗಗಳ ಎಲ್ಲ ಆಯೋಗಗಳೂ ಮುಸ್ಲಿಮರನ್ನು ತೀವ್ರ ಹಿಂದುಳಿದ ಸಮುದಾಯ ಎಂದು ಗುರುತಿಸಿವೆ. ಕಾಂತರಾಜು ಅಧ್ಯಕ್ಷತೆಯ ಆಯೋಗ ರಾಜ್ಯದಲ್ಲಿ ಮುಸ್ಲಿಮರ ಜನಸಂಖ್ಯೆ ಶೇ 16ರಷ್ಟಿದೆ ಎಂದು ಗುರುತಿಸಿದೆ. ಜನಸಂಖ್ಯೆ ಮತ್ತು ಹಿಂದುಳಿದಿರುವಿಕೆಗೆ ಅನುಗುಣವಾಗಿ 2 'ಬಿ' ಪ್ರವರ್ಗದ ಮೀಸಲಾತಿಯನ್ನು ಈಗ ನೀಡುತ್ತಿರುವ ಶೇ 4ರಿಂದ ಶೇ 8ಕ್ಕೆ ಹೆಚ್ಚಿಸಬೇಕಿದೆ. ಮುಸ್ಲಿಂ ಸಮುದಾಯದ ಸದ್ಯದ ಸ್ಥಿತಿಗತಿ ತಿಳಿದುಕೊಳ್ಳಲು ಪ್ರತ್ಯೇಕ ಸಮೀಕ್ಷೆಯನ್ನೂ ನಡೆಸಬೇಕು' ಎಂದು ನಿಯೋಗದ ಸದಸ್ಯರು ಜಯಪ್ರಕಾಶ್ ಹೆಗ್ಡೆಯವರನ್ನು ಕೋರಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.