logo
WhatsApp Image 2026-04-02 at 14.46.04.jpeg
hindalco everlast.jpeg

ನಗರ, ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆ: ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
17 Jul 2023
post image
  ಉಡುಪಿ : ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ವಿಕಲಚೇತನರಿಗೆ ಇಲಾಖೆಯ ಸೌಲಭ್ಯಗಳನ್ನು ತಲುಪಿಸುವ ಸಲುವಾಗಿ ಜಿಲ್ಲೆಯ ನಗರಸಭೆ ವ್ಯಾಪ್ತಿಯಲ್ಲಿ - 2, ಪುರಸಭೆ ಮತ್ತು ಪಟ್ಟಣ ಪಂಚಾಯತ್‌ಗಳಲ್ಲಿ ತಲಾ 1 ರಂತೆ ನಗರ ಪುನರ್ವಸತಿ ಕಾರ್ಯಕರ್ತರ (ಯು.ಆರ್.ಡಬ್ಲೂö್ಯ) ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತಲಾ 01 ರಂತೆ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ (ವಿ.ಆರ್.ಡಬ್ಲೂö್ಯ) ನೇಮಕಾತಿಗಾಗಿ ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 
ಎಸ್.ಎಸ್.ಎಲ್.ಸಿ ಉತ್ತೀರ್ಣ/ಅನುತ್ತೀರ್ಣರಾಗಿರುವ, ಶೇ.40 ಕ್ಕಿಂತ ಮೇಲ್ಪಟ್ಟು ವಿಕಲತೆ ಇರುವ ಬಗ್ಗೆ ವೈದ್ಯಕೀಯ ಪ್ರಾಧಿಕಾರದಿಂದ ನೀಡಲ್ಪಟ್ಟಿರುವ ವಿಕಲಚೇತನರ ವಿಶಿಷ್ಟ ಗುರುತುಚೀಟಿ ಮತ್ತು ವೈದ್ಯಕೀಯ ಪ್ರಮಾಣ ಪತ್ರ ಹೊಂದಿರುವ ವಿಕಲಚೇತನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574810, 2574811 ಅಥವಾ ಆಯಾ ತಾಲೂಕು ಪಂಚಾಯತ್‌ನಲ್ಲಿರುವ ಎಂ.ಆರ್.ಡಬ್ಲೂö್ಯ. (ವಿವಿಧೋದ್ಧೇಶ ಪುನರ್ವಸತಿ ಕಾರ್ಯಕರ್ತರು) ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.