



ವಂಡ್ಸೆ: ಹಸುವೊಂದು ಅಡ್ಡ ಬಂದು ಬೈಕ್ ಸ್ಕೀಡ್ ಆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಶಾಲಾ ಶಿಕ್ಷಕಿಯೋರ್ವಳು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಇಂದು ವಂಡ್ಸೆ ಸಮೀಪದ ಚಿತ್ತೂರು ಎಂಬಲ್ಲಿ ನಡೆದಿದೆ. ಹೆಮ್ಮಾಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕಿ ಅಂಬಿಕಾ ಮೃತದುರ್ದೈವಿ. ಇವರು ಗುರುವಾರ ಪತಿಯೊಂದಿಗೆ ಬೈಕ್ ನಲ್ಲಿ ಶಾಲೆಗೆ ಹೋಗುತ್ತಿದ್ದರು. ಈ ವೇಳೆ ವಂಡ್ಸೆ ಗ್ರಾಮದ ರಾಜೇಶ್ವರಿ ಕಾಂಪ್ಲೆಕ್ಸ್ ಎದುರುಗಡೆ ದನ ಅಡ್ಡ ಬಂದ ಪರಿಣಾಮ ಬೈಕ್ ಸ್ಕೀಡ್ ಆಗಿತ್ತು. ಈ ವೇಳೆ ದಂಪತಿಗಳಿಬ್ಬರು ಬೈಕ್ ಸಮೇತ ರಸ್ತೆಗೆ ಬಿದ್ದಿದ್ದು, ಪತಿ ಶಿಕ್ಷಕ ಶ್ರೀಕಾಂತ್ ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದರು. ಪತ್ನಿ ಅಂಬಿಕಾ ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಪತಿ ಶ್ರೀಕಾಂತ್ ನಾವುಂದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿದ್ದು, ಪ್ರತಿದಿನ ಜೊತೆಯಲ್ಲಿಯೇ ಹೋಗುತ್ತಿದ್ದರು ಎನ್ನಲಾಗಿದೆ. ಇವರಿಗೆ ಒಂದೂವರೆ ವರ್ಷದ ಹೆಣ್ಣು ಮಗುವಿದೆ ಎಂದು ತಿಳಿದುಬಂದಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.