



ಉಡುಪಿ : ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ ಉಡುಪಿ, ಕರ್ನಾಟಕ ಜಾನಪದ ಪರಿಷತ್ ಉಡುಪಿ ಇವರ ಸಹಯೋಗದಲ್ಲಿ ನಾಡಿನ ಜನಪದ ಕಲೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಜೂ.18 ರಂದು ವೈವಿಧ್ಯಮಯ ಜಾನಪದ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ತಿಳಿಸಿದ್ದಾರೆ. ಈ ಬಗ್ಗೆ ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಈ ಸ್ಪರ್ಧೆಯಲ್ಲಿ ಜಿಲ್ಲೆಯ 18 ರಿಂದ 50 ವರ್ಷ ವಯೋಮಿತಿಯೊಳಗಿನವರು ಎಲ್ಲರೂ ಭಾಗವಹಿಸಬಹುದು. ಗಾದೆ/ಒಗಟು ಹೇಳುವ ಸ್ಪರ್ಧೆ, ಜನಪದ ಗೀತೆ, ಜಾನಪದ ಗೀತೆ, ಜಾನಪದ ವಾದ್ಯ, ಜಾನಪದ ನೃತ್ಯ ಹಮ್ಮಿಕೊಳ್ಳಲಾಗಿದೆ. ಭಾಗವಹಿಸಲು ಇಚ್ಛಿಸುವ ತಂಡಗಳು ತಮ್ಮ ಅರ್ಜಿಯನ್ನು ಭರ್ತಿ ಮಾಡಿ ಜೂ. 16ರ ಸಂಜೆ 6 ಗಂಟೆಯೊಳಗೆ ಅನುಷಾ ಆಚಾರ್ಯ, ತಲ್ಲೂರ್ಸ್ ತಾಂಬೂಲಂ, ಕಂಫರ್ಟ್ ಟವರ್, ಕಲ್ಪನಾ ಚಿತ್ರ ಮಂದಿರ ಎದುರು ಉಡುಪಿ, 576101 ಇಲ್ಲಿಗೆ ಕಳುಹಿಸಬೇಕು. ವಿಜೇತರಿಗೆ ಪ್ರಥಮ, ದ್ವಿತೀಯ, ತೃತೀಯ ವಿಭಾಗದಲ್ಲಿ ಪ್ರಶಸ್ತಿ ಪತ್ರ ಹಾಗೂ ನಗದು ಬಹುಮಾನ ನೀಡಿ ಪುರಸ್ಕರಿಸಲಾಗುವುದು ಎಂದು ತಿಳಿಸಿದರು.
ಹಾಗೂ ಜೂ. 18 ರಂದು ಅಂಬಾಗಿಲಿನ ಅಮೃತ್ ಗಾರ್ಡನ್ ನಲ್ಲಿ ಬೆಳಿಗ್ಗೆ 9.30ಕ್ಕೆ ನಡೆಯುವ ಕಾರ್ಯಕ್ರಮವನ್ನು ಖ್ಯಾತ ಜಾನಪದ ಕಲಾವಿದ ರವಿ ಪಾಣರ ಪಡ್ಡಮ ಅವರು ಉದ್ಘಾಟಿಸಲಿದ್ದು, ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ ನ ಪ್ರವರ್ತಕ ಡಾ. ತಲ್ಲೂರು ಶಿವರಾಮ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಬಳಿಕ ಸಂಜೆ 4 ಗಂಟೆಗೆ ನಡೆಯುವ ಬಹುಮಾನ ವಿತರಣೆ ಮತ್ತು ಸೇವಾರತ್ನ ಜಾನಪದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮುಖ್ಯ ಅಥಿತಿಗಳಾಗಿ ಅಂಬಲಪಾಡಿ ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ. ನಿ.ಬಿ ವಿಜಯ ಬಲ್ಲಾಳ್, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಪಡುಬಿದ್ರೆಯ ಹಿರಿಯ ಜಾನಪದ ವಿದ್ವಾಂಸ ಡಾ. ವೈ.ಎನ್ ಶೆಟ್ಟಿ, ಮಣಿಪಾಲದ ಮಾಹೆಯ ಗಾಂಧೀಯನ್ ಸೆಂಟರ್ ಫಾರ್ ಫಿಲೋಸಾಫಿಕಲ್ ಆಂಡ್ ಸೈನ್ಸ್‌ನ ನಿದೇರ್ಶಕ ಪ್ರೊ. ವರದೇಶ ಹಿರೇಗಂಗೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕಿ ಪೂರ್ಣಿಮಾ, ಚೈತನ್ಯ ಸೋಶಿಯಲ್ ವೆಲ್ ಫೇರ್ ಫೌಂಡೇಶನ್‌ನ ಸುನೀಲ್ ಸಾಲ್ಯಾನ್ ಕಡೆಕಾರ್ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಸುದ್ದಿಗೋಷ್ಠಿಯಲ್ಲಿ ಪರಿಷತ್ ನ ಪ್ರಧಾನ ಕಾರ್ಯದರ್ಶಿ ರವಿರಾಜ ನಾಯಕ್, ಕೋಶಾಧಿಕಾರಿ ಪ್ರಶಾಂತ್ ಭಂಡಾರಿ ಉಪಸ್ಥಿತರಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.