


ಉಡುಪಿ: ಅಕ್ರಮವಾಗಿ ಕೋಣ ಸಾಗಿಸುತ್ತಿದ್ದ ಪಿಕ್ ಅಪ್ ವಾಹನವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಉಡುಪಿ ನಗರದ ಅಂಬಾಗಿಲಿನಲ್ಲಿ ಸಂಭವಿಸಿದೆ. ಬೆಳಗಾವಿಯಿಂದ ಮಂಜೇಶ್ವರಕ್ಕೆ ಅಕ್ರಮವಾಗಿ ಪಿಕ್ ಅಪ್ ವಾಹನದಲ್ಲಿ ಕೋಣ ಸಾಗಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ.
ಅಪಘಾತಗೊಂಡ ವಾಹನ ಪರಿಶೀಲಿಸಿದಾಗ ಹಿಂಸಾತ್ಮಕವಾಗಿ ಕಟ್ಟಿಹಾಕಿದ್ದ 7 ಕೋಣಗಳು ಪತ್ತೆಯಾಗಿವೆ. ವಾಹನದಲ್ಲಿದ್ದ ಇಬ್ಬರ ಪೈಕಿ ಓರ್ವ ಪರಾರಿಯಾಗಿದ್ದು, ಓರ್ವನನ್ನ ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.