logo
WhatsApp Image 2026-04-02 at 14.46.04.jpeg
hindalco everlast.jpeg

ಒಳ್ಳೆಯ ಸಂಸ್ಕಾರ ಕಲಿತರೆ ಜವಾಬ್ದಾರಿಯುತ ‌ವ್ಯಕ್ತಿಯಾಗುತ್ತಾನೆ: ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ್ ನಾಯಕ್..!!

ಟ್ರೆಂಡಿಂಗ್
share whatsappshare facebookshare telegram
2 Oct 2021
post image

ಕಾರ್ಕಳ: ಮಕ್ಕಳು ಒಳ್ಳೆಯ ಸಂಸ್ಕಾರ ಕಲಿತರೆ ಮುಂದಿನ ದಿನಗಳಲ್ಲಿ ಒಳ್ಳೆಯ ಜವಾಬ್ದಾರಿಯುತ ಶ್ರೇಷ್ಠ ವ್ಯಕ್ತಿಯಾಗುತ್ತಾನೆ ಎಂದು ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ್ ನಾಯಕ್ ಹೇಳಿದರು.

ಅವರು ಅ.2ರಂದು ಕಾರ್ಕಳ ತಾಲೂಕಿನ ಮುಂಡ್ಕೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ 'ನಮ್ಮ ಫ್ರೆಂಡ್ಸ್ ಮುಂಡ್ಕೂರು' ಇದರ "25ನೇ ಹೆಜ್ಜೆಯ ಸಂಭ್ರಮ"ದ ಅಂಗವಾಗಿ ಮಕ್ಕಳಿಗೆ ಪ್ರೋತ್ಸಾಹ ಧನ ವಿತರಣೆ ಹಾಗೂ ಗಾಂಧಿ ಜಯಂತಿಯ ಪ್ರಯುಕ್ತ ಸ್ವಚ್ಛತಾ ಜಾಥಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಕಾರ್ಯಕ್ರಮ ಉದ್ಘಾಟಿಸಿದ ವಿದ್ಯಾವರ್ಧಕ ಪದವಿ ಪೂರ್ವ ಕಾಲೇಜಿನ ಸಂಚಾಲಕರಾದ ಡಾ. ಪಿ.ಬಾಲಕೃಷ್ಣ ಆಳ್ವ ಅವರು, ಮುಂಡ್ಕೂರು ಸ.ಹಿ.ಪ್ರಾ.ಶಾಲೆಯಲ್ಲಿ ಪ್ರಸ್ತುತ ವರ್ಷದಲ್ಲಿ ಒಂದನೇ ತರಗತಿಗೆ ಸೇರ್ಪಡೆಯಾದ 21 ಮಕ್ಕಳಿಗೆ ಪ್ರೋತ್ಸಾಹ ಧನ ವಿತರಿಸಿ, ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನಾಚರಣೆಯಂದು ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಧನ ಸಹಾಯ ನೀಡಿದ ತಂಡಕ್ಕೆ ಶುಭಾಶಂಸನೆ ಸಲ್ಲಿಸಿದರು.

ಕಜೆ ಮಾರಿಗುಡಿಯ ಗೌರವಾಧ್ಯಕ್ಷ ಎಂ.ಜಿ.ಕರ್ಕೇರ, ಚಂದ್ರಹಾಸ ಶೆಟ್ಟಿ, ನಮ್ಮ ಫ್ರೆಂಡ್ಸ್ ಮುಂಡ್ಕೂರು ತಂಡದ ಅಧ್ಯಕ್ಷ ಪ್ರಕಾಶ್ ನಾಯ್ಕ್, ಕಾರ್ಯದರ್ಶಿ ಅರುಣ್ ರಾವ್, ಗೌರವ ಸಲಹೆಗಾರರಾದ ಪ್ರಭಾಕರ ಶೆಟ್ಟಿ ಕೊಂಡಲ್ಲಿ, ಉದಯ್ ಕುಮಾರ್, ಶರತ್ ಶೆಟ್ಟಿ, ಶಾಲಾ ಮುಖ್ಯೋಪಾಧ್ಯಾಯಿನಿ ಪೂರ್ಣಿಮಾ ಭಟ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಮೇಶ ಪೂಜಾರಿ, ಶ್ರೀಮತಿ ಲಲಿತಾ, ಪ್ರಮೋದ್ ಕಜೆ, ಪ್ರಶಾಂತ್ ಆಚಾರ್ಯ ಮತ್ತಿತರಿದ್ದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.