



ಕರ್ನಾಟಕ ವಿಧಾನ ಸಭೆ ಚುನಾವಣೆ 2023 ರ ಮತ ಎಣಿಕೆ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮಾನ್ಯ ಜಿಲ್ಲಾ ಚುನಾವಣಾಧಿಕಾರಿ ಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೇ.13ರಂದು ನಿಷೇಧಾಜ್ಞೆ ಜಾರಿ ಗೊಳಿಸಿ ಆದೇಶ ಮಾಡಿರುತ್ತಾರೆ. ಈ ಆದೇಶದಂತೆ ಮೇ.13ರಂದು ಬೆಳಿಗ್ಗೆ 5.00 ಗಂಟೆಯಿಂದ ಮಧ್ಯರಾತ್ರಿ 12.00ಗಂಟೆ ವರೆಗೆ
2)ಯಾವುದೇ ರೀತಿಯ ಮಾರಕಾಸ್ತ್ರಗಳನ್ನು, ಕಲ್ಲು, ಕ್ಷಾರಕ ವಸ್ತುಗಳು, ಸ್ಫೋಟಕಗಳನ್ನು ಸಂಗ್ರಹಿಸುವುದು, ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ.
3)ಯಾವುದೇ ಪ್ರತಿಕೃತಿ ಪ್ರದರ್ಶನ or ಸುಡುವುದನ್ನು ನಿಷೇಧಿಸಲಾಗಿದೆ.
4)ಯಾವುದೇ ಬಹಿರಂಗ ಘೋಷಣೆ ಕೂಗುವುದು, ವಾದ್ಯ ಬಾರಿಸುವುದು, ಪದ ಹಾಡುವುದು, ನಕಲಿ ಪ್ರದರ್ಶನ, ಪ್ರಚೋದನಕಾರಿ ಘೋಷಣೆ ಕೂಗುವುದು, ವ್ಯಕ್ತಿಗಳ ತೆಜೋವಧೆ ಮಾಡುವ ಕೃತ್ಯಗಳು ಇತ್ಯಾದಿಗಳನ್ನು ನಿಷೇಧಿಸಿದೆ.
5)ಸಾರ್ವಜನಿಕ ಗಾಂಭಿರ್ಯ, ನೈತಿಕತೆ, ಕಾನೂನು ಸುವ್ಯವಸ್ಥೆ ಗೆ ಭಂಗ ತರುವಂತಹ ಯಾವುದೇ ಕೃತ್ಯ ದಲ್ಲಿ ತೊಡ ಗುವುದನ್ನು ನಿಷೇಧಿಸಿದೆ.
ಈ ಮೇಲ್ಕಂಡ ಆದೇಶವನ್ನು ಉಲ್ಲಂಘಸಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು.
ಈ ಆದೇಶ ಜಾರಿ ಮಾಡುವಲ್ಲಿ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.