



ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆ ಯಡಿ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ ಜನಾಂಗದ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸರ್ಕಾರಿ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶ ಸಿಗದೆ ಇರುವ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರೆಸಲು ಅನುಕೂಲವಾಗುವಂತೆ ಊಟ ಮತ್ತು ವಸತಿ ಸೌಲಭ್ಯಕ್ಕೆ ವಿದ್ಯಾಸಿರಿ ಯೋಜನೆಯಡಿ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 31 ರ ವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ ಅಥವಾ ಉಡುಪಿ ದೂರವಾಣಿ ಸಂಖ್ಯೆ : 0820-2574596, ಕುಂದಾಪುರ ದೂರವಾಣಿ ಸಂಖ್ಯೆ: 08254-230370 ಹಾಗೂ ಕಾರ್ಕಳ ದೂರವಾಣಿ ಸಂಖ್ಯೆ: 08258-231101 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸುವoತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.