



ಕಾರ್ಕಳ : ಕಾಶ್ಮೀರದಲ್ಲಿ ಹಿಂದೂಗಳ ಮೇಲೆ ದಾಳಿ ಖಂಡಿಸಿ ಕಾರ್ಕಳ ಬಸ್ ನಿಲ್ದಾಣದ ಬಳಿ ಅ. 9ರಂದು ವಿಹಿಂಪ, ಬಜರಂಗದಳ ಕಾರ್ಕಳ ಪ್ರಖಂಡದ ವತಿಯಿಂದ ಪ್ರತಿಭಟನೆ ನಡೆಯಿತು.
ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಭಜರಂಗದಳ ಪ್ರಾಂತೀಯ ಸಂಚಾಲಕ ಸುನಿಲ್ ಕೆ.ಆರ್., 1990ರ ನಂತರ ಕಾಶ್ಮೀರದಲ್ಲಿ ಹಿಂದೂಗಳ ಸರಣಿ ಹತ್ಯೆ ನಡೆಯುತ್ತಿದೆ. ಒಂದೆರಡು ವಾರದಲ್ಲಿ 8 ಹಿಂದೂ ಕಾಶ್ಮೀರ ಪಂಡಿತರ ಹತ್ಯೆಯಾಗಿದೆ. ಅಲ್ಲಿನ ಪಂಡಿತರು, ಹಿಂದೂಗಳಿಗೆ ಧೈರ್ಯ, ಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಹಿಂದೂ ಸಮಾಜ ಒಗ್ಗೂಡಬೇಕೆಂದರು.
ವಿಹಿಂಪ ಜಿಲ್ಲಾ ಉಪಾಧ್ಯಕ್ಷ ಅಶೋಕ್, ಕಾರ್ಯದರ್ಶಿ ಸುಧೀರ್ ನಿಟ್ಟೆ, ಭಜರಂಗದಳದ ಅವಿನಾಶ್, ಪ್ರಸಾದ್, ಶರತ್ ಉಪಸ್ಥಿತರಿದ್ದರು. ಶೈಲೇಶ್ ಸ್ವಾಗತಿಸಿ, ನಿರೂಪಿಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.