



ಇಂಫಾಲ: ಮಣಿಪುರದಲ್ಲಿ ಎಸ್‌ಟಿ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಹಿಂಸಾಚಾರ ಭುಗಿಲೆದ್ದಿದ್ದು 8 ಜಿಲ್ಲೆಗಳಲ್ಲಿ ಕರ್ಪೂ ಜಾರಿಗೊಳಿಸಲಾಗಿದೆ. ಜತೆಗೆ 5 ದಿನಗಳ ಕಾಲ ಇಂಟರ್ ನೆಟ್ ಸೇವೆಯನ್ನೂ ಸ್ಥಗಿತಗೊಳಿಸಲಾಗಿದೆ.
ಮುಂಜಾಗ್ರತೆ ಕ್ರಮವಾಗಿ ಇಂಫಾಲ್ ಪಶ್ಚಿಮ, ಕಾಕ್ಸಿಂಗ್, ತೌಬಲ್, ಜಿರಿಬಾಮ್, ಬಿಷ್ಣುಪುರ, ಚುರಾಚಂದ್‌ಪುರ, ಕಾಂಗ್‌ಪೋಕ್ಸಿ ಮತ್ತು ತೆಂಗ್‌ನೌಪಾಲ್ ಜಿಲ್ಲೆಗಳಲ್ಲಿ ಕರ್ಪ್ಯೂ ವಿಧಿಸಲಾಗಿದೆ.
ಕೆಲ ಕಿಡಿಗೇಡಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಹರಡುವ ಮೂಲಕ ಸಮಾಜದಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಇಂಟರ್‌ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ ಎಂದು ಗೃಹ ಇಲಾಖೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.