



ಕಾರ್ಕಳ: ಹಿಂಸಾತ್ಮಕವಾಗಿ ಜಾನುವಾರುಗಳನ್ನು ಸ್ವಿಫ್ಟ್ ಕಾರಿನಲ್ಲಿ ಕಸಾಯಿಖಾನೆಗೆ ಸಾಗಿಸುತ್ತಿದ್ದಾಗ ಕಾರಿನ ಜೊತೆ ಓರ್ವ ಅರೋಪಿಯನ್ನು ಹೆಬ್ರಿ ಪೋಲೀಸರು ಬೆನ್ನಟ್ಟಿ ಹಿಡಿದ ಘಟನೆ ಹೆಬ್ರಿ ತಾಲೂಕಿನ ಚಾರ ಗ್ರಾಮದ ನವೋದಯ ಶಾಲೆ ಬಳಿ ನಡೆದಿದೆ
ಆರೋಪಿ ಶಕಿಲ್ ಅಹಮದ್ ಟಿ.ಕೆ ಬಂಧಿತ ಆರೋಪಿ
ಜಾನುವಾರುಗಳನ್ನು ಕೈಕಾಲು ಕಟ್ಟಿ ಹಿಂಸಾತ್ಮಕವಾಗಿ ಕಾರಿನಲ್ಲಿ ತುಂಬಿಸಿ ಕಸಾಯಿಖಾನೆಗೆ ಸಾಗಿಸುತ್ತಿದ್ದು, ಕಾರಿನಲ್ಲಿದ್ದ ಇಬ್ಬರ ಪೈಕಿ ಒಬ್ಬನನ್ನು ಪೊಲೀಸರು ಸೆರೆಹಿಡಿದಿದ್ದು ಇನ್ನೊಬ್ಬಪರಾರಿಯಾಗಿದ್ದಾನೆ.
ಹೆಬ್ರಿ ಪೊಲೀಸರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ಭಾನುವಾರ ರಾತ್ರಿ ಪೊಲೀಸರು ಚಾರ ನವೋದಯ ಶಾಲೆಯ ಬಳಿ ವಾಹನ ತಪಾಸಣೆ ನಡೆಸುತ್ತಿದ್ದಾಗ, ರಾತ್ರಿ ೮.೩೦ರ ವೇಳೆಗೆ ಬೇಳಂಜೆ ಕಡೆಯಿಂದ ಬಂದ ಸ್ವಿಫ್ಟ್ ಕಾರನ್ನು ನಿಲ್ಲಿಸುವಂತೆ ಪೊಲೀಸರು ಸೂಚನೆ ನೀಡಿದರೂ ಕಾರಿನಲ್ಲಿದ್ದವರು ಕಾರನ್ನು ನಿಲ್ಲಿಸದೆ ಹೆಬ್ರಿ ಕಡೆಗೆ ವೇಗವಾಗಿ ಚಲಾಯಿಸಿದ್ದಾರೆ. ಇದರಿಂದ ಅನುಮಾನಗೊಂಡ ಪೊಲೀಸರು ಕಾರನ್ನು ಬೆನ್ನಟ್ಟಿದಾಗ ಕಾರಿನವನು ಚಾರ ಸರ್ಕಲ್‌ನಿಂದ ಬ್ರಹ್ಮಾವರ ರಸ್ತೆಗೆ ಹೋಗಿ ಮಂಡಾಡಿಜೆಡ್ಡು ಕೆರೆಬೆಟ್ಟು ದೇವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿ ಕಾರನ್ನು ನಿಲ್ಲಿಸಿ ಕಾರಿನಿಂದಿಳಿದು ಪರಾರಿಯಾಗಲು ಯತ್ನಿಸಿದಾಗ ಪೊಲೀಸರು ಶಖಿಲ್ ಅಹಮದ್ ಟಿ.ಕೆ ಎಂಬವನನ್ನು ಹಿಡಿದಿದ್ದಾರೆ, ಇನ್ನೋರ್ವ ಆರೋಪಿ ಪರಾರಿಯಾಗಿದ್ದಾನೆ. ಬಂಧಿತನನ್ನು ಪೊಲೀಸರು ವಿಚಾರಣೆಗೊಳಪಡಿಸಿದಾಗ ಬೇಳಂಜೆ ಗ್ರಾಮದ ಈಸರಗದ್ದೆ ಎಂಬಲ್ಲಿದ ದನಗಳನ್ನು ಕಳವು ಮಾಡಿಕೊಂಡು ಕಸಾಯಿಖಾನೆಗೆ ಸಾಗಿಸುತ್ತಿರುವುದಾಗಿ ಹೇಳಿದ್ದಾನೆ. ಜಾನುವಾರುಗಳನ್ನು ಹಿಂಸಾತ್ಮಕವಾಗಿ ಕಾರಿನಲ್ಲಿ ತುಂಬಿಸಿದ್ದರದ ಒಂದು ಜಾನುವಾರು ಕಾರಿನಲ್ಲೇ ಮೃತಪಟ್ಟಿತ್ತು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.