



ಉಜ್ಜೈನಿ: ಖ್ಯಾತ ಕ್ರಿಕೆಟ್ ಆಟಗಾರ ವಿರಾಟ್ ಕೊಹ್ಲಿ ಮತ್ತು ಅವರ ಪತ್ನಿ ಅನುಷ್ಕಾ ಶರ್ಮಾ ಉಜ್ಜೈ ನಿ ಯಲ್ಲಿರುವ ಮಹಾ ಕಾಳೇಶ್ವರನ ದರ್ಶನ ಪಡೆದಿದ್ದಾರೆ. ಗರ್ಭ ಗುಡಿಯ ಮುಂಭಾಗದಲ್ಲಿ ವಿರಾಟ್ ಮತ್ತು ಅನುಷ್ಕಾ ನೆಲದ ಮೇಲೆ ಕುಳಿತುಕೊಂಡು ಮಹಾ ಕಾಳೇಶ್ವರನ ಪೂಜೆಯಲ್ಲಿ ಭಾಗಿಯಾಗಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಮೂರನೆ ಟೆಸ್ಟ್ ಪಂದ್ಯದಲ್ಲಿ ಭಾರತ ಸೋಲು ಅನುಭವಿಸಿದ ಬಳಿಕ ಕೊಹ್ಲಿ ದೇವಸ್ಥಾನಕ್ಕೆ ತೆರಳಿದ್ದಾರೆ. ನಾಲ್ಕನೇ ಟೆಸ್ಟ್ ಅಹ್ಮದಾಬಾದ್ ನಲ್ಲಿ ನಡೆಯಲಿದ್ದು, ಇದು ಭಾರತಕ್ಕೆ ಅತ್ಯಂತ ಮಹತ್ವದ್ದಾಗಿದೆ.
ವಿರಾಟ್ ಕೊಹ್ಲಿ ಧಾರ್ಮಿಕ ಆಚರಣೆಗಳಲ್ಲಿ ನಂಬಿಕೆ ಇರಿಸಿದ್ದಾರೆ. ಕಳೆದ ವರ್ಷ ಅವರ ಹೋಟೆಲ್ ನ ಕೋಣೆಯ ದೃಶ್ಯ ವೈರಲ್ ಆಗಿತ್ತು. ಟೇಬಲ್ ಮೇಲೆ ಲಕ್ಷ್ಮೀ ಮತ್ತು ಗಣೇಶನ ಫೋಟೋ ಇರಿಸಿದ್ದು ಕೂಡ ಕಂಡು ಬಂದಿತ್ತು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.