



ಹೆಬ್ರಿ : ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ರಾಜ್ಯಾಧ್ಯಕ್ಷರಾದ ವಿಧಾನ ಪರಿಷತ್ ಸದಸ್ಯ ಕೆ.ಪಿ.ನಂಜುಂಡಿ ಅವರಿಗೆ ಸಚಿವ ಸ್ಥಾನ ನೀಡಿ ಎಂದು ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ರಾಜ್ಯ ಮಾಧ್ಯಮ ವಕ್ತಾರ ಮಾರುತಿ ಬಡಿಗೇರ್ ಒತ್ತಾಯಿಸಿದ್ದಾರೆ. ಅವರು ಹೆಬ್ರಿಯಲ್ಲಿ ಮಂಗಳವಾರ ಪತ್ರಿಕಾ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ. ಕಳೆದ ಚುನಾವಣೆಯಲ್ಲಿ ಯಡಿಯೂರಪ್ಪನವರು ಕೆ.ಪಿ.ನಂಜುಂಡಿ ಅವರಿಗೆ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದರು. ವಿಶ್ವಕರ್ಮ ಅಭಿವೃದ್ಧಿ ನಿಗಮಕ್ಕೂ ೫೦ ಕೋಟಿ ವಾರ್ಷಿಕ ಅನುದಾನ ನೀಡುವುದಾಗಿ ಹೇಳಿದ್ದರು. ಅದನ್ನು ಮಾಡಿಲ್ಲ. ಕೇವಲ ನಾಮಕಾವಸ್ಥೆಗೆ ಅಭಿವೃದ್ಧಿ ನಿಗಮ ಇದೆ ಎಂದು ಹೇಳಿರುವ ಮಾರುತಿ ಬಡಿಗೇರ್ ನಿರಂತರವಾಗಿ ಬಿಜೆಪಿ ಸರ್ಕಾರ ವಿಶ್ವಕರ್ಮರಿಗೆ ಅನ್ಯಾಯ ಮಾಡುತ್ತ ಬಂದಿದೆ. ಕೊರೋನ ಲಾಕ್ ಡೌನ್ ಸಂಕಷ್ಟದಲ್ಲೂ ರಾಜ್ಯ ಬಿಜೆಪಿ ಸರ್ಕಾರ ನೆರವಾಗಿಲ್ಲ. ಪರಿಹಾರ ನೀಡಿಲ್ಲ, ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಸಂಚಾರ ಮಾಡಿ ಸಂಘಟನೆಯನ್ನು ಬಲಪಡಿಸಿ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ಮಾರುತಿ ಬಡಿಗೇರ್ ಹೇಳಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.