



ಕುಂದಾಪುರ: ಕನ್ನಡ ಚಿತ್ರರಂಗದ ಹಿರಿಯ ನಟಿ ಲಕ್ಷ್ಮಿ ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದರು. ಬುಧವಾರದಂದು ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ಕೊಟ್ಟ ಅವರು ಶ್ರೀ ದೇವಿಯ ದರ್ಶನ ಪಡೆದರು. ನಂತರ ಮಾತನಾಡಿದ ಅವರು ಈ ದೇವಾಲಯಕ್ಕೆ ಬಂದಾಗ ನನ್ನ ತವರು ಮನೆಗೆ ಬಂದ ಹಾಗೆ ಆಗುತ್ತದೆ. ನನ್ನ ತಾಯಿಯನ್ನು ನೋಡಿದೆ. ಈ ದೇವಸ್ಥಾನದ ಶುದ್ದತೆ ನಿಜಕ್ಕೂ ಆಶ್ಚರ್ಯವಾಗುತ್ತದೆ. ಬೇರೆ ಬೇರೆ ಕಡೆಗಳಿಂದ ಬರುವ ಭಕ್ತರಿಗೆ ಕಿಂಚಿತ್ತೂ ಸಮಸ್ಯೆಯಾಗದಂತೆ ವ್ಯವಸ್ಥೆ ಮಾಡಿರುವುದು ಬಹಳ ಸಂತಸವಾಗಿದೆ ಎಂದು ಹೇಳಿದರು. ದಕ್ಷಿಣ ಭಾರತ ಚಿತ್ರರಂಗದ ಖ್ಯಾತ ಕಲಾವಿದೆಯರಲ್ಲೊಬ್ಬರಾದ ಲಕ್ಷ್ಮಿ ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಚಿತ್ರರಂಗದ ಅನೇಕ ಚಲನಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಈ ಕಾರಣದಿಂದಾಗಿ ಪಂಚಭಾಷಾ ತಾರೆ ಎಂದೂ ಕರೆಯಿಸಿಕೊಳ್ಳುತ್ತಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.