



ಕಾರ್ಕಳ : ನಾವು ದೇಹವನ್ನು ಸ್ವಚ್ಛಗೊಳಿಸುತ್ತೇವೆ, ಆದರೆ ಅಂತರAಗದ ಮಲಿನವನ್ನು ತೊಳೆಯುವಲ್ಲಿ ವಿಫಲರಾಗಿದ್ದೇವೆ. ಎಂದು ಆಳ್ವಾಸ್ ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ ಮುಂಡ್ಕೂರು ಹೇಳಿದರು. ಅವರು ಭುವನೇಂದ್ರ ಕಾಲೇಜಿನಲ್ಲಿ ಮಾನವ ಹಕ್ಕುಗಳ ದಿನಾಚರಣೆಯ ಪ್ರಯುಕ್ತ ಕಾಲೇಜಿನ ಮಾನವಿಕ ಸಂಘ ಮತ್ತು ಮಾನವ ಹಕ್ಕು ಹಾಗೂ ಧಾರ್ಮಿಕ ಸಹಬಾಳ್ವೆ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ನಡೆದ ಮಾನವ ಹಕ್ಕುಗಳ ಅರಿವು ಜಾಗೃತಿ ಕಾಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ನಮ್ಮಲ್ಲಿ ಶಿಕ್ಷಣ ಜಾಗೃತವಾಗಿದ್ದರೂ,ಸಮಾಜದಲ್ಲಿ ಅನ್ಯಾಯ,ಅಪನಂಬಿಕೆ, ಶ್ರೇಣೀಕೃತ ವ್ಯವಸ್ಥೆ ಹಾಗೆಯೇ ಮುಂದುವರಿಯುತ್ತಿದೆ. ಇದರಿಂದಾಗಿ ಸಮಾಜದಲ್ಲಿ ಮಾನವನ ಬದುಕಿಗೆ ನೆಮ್ಮದಿ ಕಡಿಮೆಯಾಗುತ್ತಿದೆ. ಇದಕ್ಕೆ ಕಾರಣ ಮಾನವ ಹಕ್ಕುಗಳ ಸರಿಯಾದ ತಿಳುವಳಿಕೆ ಇಲ್ಲದಿರುವುದು ಮತ್ತು ಅವುಗಳನ್ನು ಹೊಣೆಯರಿತು ಪಾಲಿಸದಿರುವುದು ಖೇದಕರ ಎಂದು ಬೇಸರ ವ್ಯಕ್ತಪಡಿಸಿದರು. ಕಾಲೇಜಿನ ವಿದ್ಯಾರ್ಥಿಕ್ಷೇಮಪಾಲನಾಧಿಕಾರಿ ಪ್ರೊ.ದತ್ತಾತ್ರೇಯ ಅಧ್ಯಕ್ಷತೆ ವಹಿಸಿದ್ದರು. ಮಾನವಹಕ್ಕುಗಳ ಸಂಘದ ಸಂಯೋಜಕಿ ಪ್ರೊ. ಸುಮಾಲಿನಿ ಜೈನ್ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ರಾಷ್ಟ್ರೀಯ ಶಿಕ್ಷಣ ನೀತಿಯ ಸಂಯೋಜಕರಾದ ಪ್ರೊ. ಲಕ್ಷ್ಮೀನಾರಾಯಣ ಅವರು ಪ್ರಸ್ತಾವನೆಯ ಮಾತುಗಳನ್ನಾಡಿದರು. ನವಮಿ ಸ್ವಾಗತಿಸಿ, ದಯಾನಂದ ¥್ರಸ್ತಾಪಿಸಿದರು . ಆಶಿಕಾ ಪ್ರಾರ್ಥಿಸಿ, ಶ್ವೇತಾ. ಕಾರ್ಯಕ್ರಮ ನಿರೂಪಿಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.