



ಉಡುಪಿ: ತೋಟಗಾರಿಕೆ ಇಲಾಖೆಯ ವತಿಯಿಂದ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕೆ ಕ್ಷೇತ್ರದ ರೈತ ಸೇವಾ ಕೇಂದ್ರದ ಪ್ರಾಂಗಣದಲ್ಲಿ ಸ್ಥಳೀಯ ಗ್ರಾಹಕರು/ ಸಾರ್ವಜನಿಕರಿಗೆ ಅಲ್ಲದೇ ಉಡುಪಿ ಸುತ್ತಮುತ್ತಲಿನ ನಾಗರೀಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೃಷಿ, ತೋಟಗಾರಿಕೆ ಹಾಗೂ ಕೃಷಿ ಸಂಬAಧಿತ ವಿವಿಧ ಸಂತೆ/ ವಾರದ ಸಂತೆ ಆಯೋಜನೆ ಮಾಡಲು ಆಸಕ್ತರು, ಸಂಘ-ಸAಸ್ಥೆಗಳು, ರೈತರು ಹಾಗೂ ಕೃಷಿ ಸಂಬಂಧಿತ ಸಂಘಗಳು ನಿಯಮಾನುಸಾರ ಮತ್ತು ಎ.ಪಿ.ಎಂ.ಸಿ ಮಾರ್ಗಸೂಚಿಗಳನ್ವಯ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಉಪನಿರ್ದೇಶಕರು, ಉಡುಪಿ ಇವರ ಅಧೀನದ ಸಹಾಯಕ ತೋಟಗಾರಿಕೆ ನಿರ್ದೇಶಕರು, ಶಿವಳ್ಳಿ ಮಾದರಿ ತೋಟಗಾರಿಕೆ ಕ್ಷೇತ್ರ, ದೊಡ್ಡಣಗುಡ್ಡೆ, ಉಡುಪಿ ಇವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.