


ಹರ್ಯಾಣದ ಮಹರ್ಷಿ ದಯಾನಂದ ವಿಶ್ವವಿದ್ಯಾಲಯದಲ್ಲಿ ನಡೆದ ಅಖಿಲ ಭಾರತ ವಿಶ್ವವಿದ್ಯಾಲಯ ರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಮಂಗಳೂರು ವಿಶ್ವವಿದ್ಯಾಲಯ ಪ್ರತಿನಿಧಿಸಿ ಚಿನ್ನದ ಪದಕ ವಿಜೇತೆಯಾದ ಉಡುಪಿಯ ಛಾಯಾ ಪರ್ಕಳ ಅವರನ್ನು ಹುಟ್ಟೂರಿನಲ್ಲಿ ಸಾರ್ವಜನಿಕರು ಅದ್ಧೂರಿಯಾಗಿ ಮೆರವಣಿಗೆ ಮೂಲಕ ಸ್ವಾಗತಿಸಿ ಅಭಿನಂದಿಸಿದರು. ಈ ಕ್ರೀಡೆಯಲ್ಲಿ ಅಮೋಘ ಸಾಧನೆ ಮಾಡಿದ ಈಕೆ, ಹಲವು ವರ್ಷಗಳ ಕಠಿಣ ಪರಿಶ್ರಮದ ಫಲವಾಗಿ ವಿಶೇಷವಾಗಿ ಮಹಿಳಾ ತಂಡದ ಕರಾಟೆ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಮೊದಲ ಬಾರಿಗೆ ಪದಕ ಪಡೆಯುವ ನೂತನ ದಾಖಲೆ ಬರೆದಿದ್ದಾಳೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.