logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ದೀಪಾವಳಿ ಹಬ್ಬ ಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ರಾಜ್ಯ ಸರಕಾರ , ಮಾರ್ಗಸೂಚಿ ಯಲ್ಲಿ ಎನಿದೆ ?

ಟ್ರೆಂಡಿಂಗ್
share whatsappshare facebookshare telegram
30 Oct 2021
post image

ಬೆಂಗಳೂರು; ನ್ಯಾಯಾಲಯವು ನೀಡಿದ ನಿರ್ದೇಶನಗಳಲ್ಲಿ ಅನುಮತಿಸಿರುವ ಹಸಿರು ಪಟಾಕಿಗಳನ್ನು ಬಿಟ್ಟು, ಉಳಿದ ಯಾವುದೇ ಇತರ ಪಟಾಕಿಗಳನ್ನು ಮಾರಾಟ ಮಾಡುವಂತೆ ಮತ್ತು ಬಳಸುವಂತಿಲ್ಲ. ಸಂಬಂಧಪಟ್ಟ ಇಲಾಖೆ/ಪ್ರಾಧಿಕಾರಗಳಿಂದ ಅಧಿಕೃತ ಪರವಾನಗಿಯನ್ನು ಪಡೆದ ಮಾರಾಟಗಾರರು ಹಸಿರು ಪಟಾಕಿಯನ್ನು ಮಾತ್ರ ಮಾರಾಟ ಮಾಡಬೇಕು. ಈ ಮಾರಾಟ ಮಳಿಗೆಗಳನ್ನು ಸಂಬಂಧಪಟ್ಟ ಇಲಾಖೆ/ಪ್ರಾಧಿಕಾರದಿಂದ ನೀಡಿರುವ ಪರವಾನಗಿಯಲ್ಲಿ ನಿಗದಿಪಡಿಸಿರುವ ದಿನಾಂಕ ಮತ್ತು ಸ್ಥಳದಲ್ಲಿ ಮಾತ್ರ ತಾತ್ಕಾಲಿಕ ‘ಹಸಿರು ಪಟಾಕಿ’ ಅಂಗಡಿಗಳನ್ನು ಇಡಬೇಕು. ಬೇರೆ ಸ್ಥಳದಲ್ಲಿ ಮತ್ತು ದಿನಾಂಕಗಳಲ್ಲಿ ಅಂಗಡಿಯನ್ನು ತೆರೆಯಬಾರದು. ಸಾರ್ವಜನಿಕ ವಸತಿ ಸ್ಥಳಗಳಿಂದ ದೂರವಿರುವ ಮೈದಾನ ಅಥವಾ ಬಯಲು ಪ್ರದೇಶಗಳಲ್ಲಿ ಪಟಾಕಿ ಮಳಿಗೆಗಳನ್ನು ಸ್ಥಾಪಿಸಲು ಸಂಬಂಧಿಸಿದ ಇಲಾಖೆ ಪ್ರಾಧಿಕಾರಗಳು ಅನುಮತಿಸಬೇಕು. ಮಳಿಗೆಗಳಲ್ಲಿ ಎರಡು ಕಡೆಯಿಂದ ಸರಾಗವಾಗಿ ಗಾಳಿಯಾಡುವಂತಿರಬೇಕು. ಒಂದು ಮಾರಾಟ ಮಳಿಗೆಯಿಂದ ಮತ್ತೊಂದು ಮಾರಾಟ ಮಳಿಗೆಗೆ 6 ಮೀಟಲ್ ಅಂತರವಿರಬೇಕು. ಪ್ರತಿಯೊಂದು ಮಳಿಗೆಗಳಲ್ಲಿ ಸಂಬಂಧಪಟ್ಟ ಇಲಾಖೆ/ಪ್ರಾಧಿಕಾರದಿಂದ ನೀಡಿರುವ ಪರವಾನಗಿ ಪ್ರತಿಯನ್ನು ಸಾರ್ವಜನಿಕರಿಗೆ ಕಾಣುವಂತೆ ಪ್ರದರ್ಶಿಸಬೇಕು. ಪರವಾನಗಿ ಪತ್ರವನ್ನು ಪಡೆದವರು ಕಡ್ಡಾಯವಾಗಿ ಮಳಿಗೆಗಳಲ್ಲಿ ಹಾಜರಿರಬೇಕು. ಹಸಿರು ಪಟಾಕಿಗಳನ್ನು ಮಾರಾಟ ಮಾಡುವ ಮಳಿಗೆಗಳ ಸುತ್ತಮುತ್ತ ಸ್ಯಾನಿಟೈಸೇಷನ್ ಮಾಡುವುದು ಹಾಗೂ ಪಟಾಕಿಗಳ ಖರೀದಿಗೆ ಬರುವ ಸಾರ್ವಜನಿಕರಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ಯಾ ನಿಂಗ್ ವ್ಯವಸ್ಥೆಯನ್ನು ಕಲ್ಪಿಸುವುದರ ಜೊತೆಗೆ ಕನಿಷ್ಠ 6 ಅಡಿ ವ್ಯಕ್ತಿಗತ ಅಂತರವನ್ನು ಕಾಯ್ದುಕೊಳ್ಳಬೇಕು. ಪಟಾಕಿ ಮಾರುವ ವ್ಯಾಪಾರಸ್ಥರು ಮತ್ತು ಖರೀದಿಗೆ ಬರುವ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಪಟಾಕಿ ಖರೀದಿಯ ಸಂದರ್ಭದಲ್ಲಿ ಜನದಟ್ಟಣೆಯಾಗದಂತೆ ನೋಡಿಕೊಳ್ಳಬೇಕು. ಕೋವಿಡ್-19 ಸಾಂಕ್ರಾಮಿಕ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರಕಾರವು ಹೊರಡಿಸಿದ ಮಾರ್ಗಸೂಚಿಗಳನ್ನು ತಪ್ಪದೇ ಕಟ್ಟು ನಿಟ್ಟಾಗಿ ಪಾಲಿಸಬೇಕು. ಅಲ್ಲದೇ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಮಹಾನಗರ ಪಾಲಿಕೆ, ಅಗ್ನಿಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಸ್ಥಳೀಯಾಡಳಿತ ಸಂಸ್ಥೆ /ಪ್ರಾಧಿಕಾರಗಳಿಂದ ಹೊರಡಿಸಲಾಗುವ ಎಲ್ಲಾ ಆದೇಶ / ನಿರ್ದೇಶನ ಹಾಗೂ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರಕಾರದ ಆದೇಶ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 188ರ ಅಡಿಯಲ್ಲಿ ಶಿಸ್ತಿನ/ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರ ಕಾನೂನು ಉಪಬಂಧಗಳ ಮೇರೆಗೆ ಕ್ರಮ ಜರಗಿಸಲಾಗುವುದು ಎಂದು ಸರಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಆದೇಶ ಹೊರಡಿಸಿದ್ದಾರೆ.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.