



ಕಾರ್ಕಳ : ನಾಡಹಬ್ಬ ದಸರಾದಲ್ಲಿ ರಾಜ್ಯ ಸರ್ಕಾರ ಉರ್ದು ಕವಿಗೋಷ್ಠಿ ಆಯೋಜಿಸಿದೆ. ಕನ್ನಡದ ಶ್ರೀಮಂತ ಸಂಸ್ಕೃತಿಯ ಪ್ರದರ್ಶನಕ್ಕೆ ವೇದಿಕೆಯಾಗಬೇಕಿದ್ದ ದಸರಾದಲ್ಲಿ ಉರ್ದು ಹೇರಿಕೆ ಏಕೆ ? ತನ್ನ ಮತ ಬ್ಯಾಂಕ್ ಓಲೈಕೆಗಾಗಿ ಕಾಂಗ್ರೆಸ್ ಕನ್ನಡದ ಮೇಲೆ ಉರ್ದು ಹೇರುತ್ತಿದೆ. ಟಿಪ್ಪು ನಿಜಗನಸು ಸಾಕಾರಗೊಳಿಸುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಇನ್ನೊಂದು ಹೆಜ್ಜೆ ಇಟ್ಟಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಾಜಿ ಸಚಿವ ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಲೇವಡಿ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಅವರು ಮಹಿಷ ದಸರಾ, ಉರ್ದು ಕವಿಗೋಷ್ಠಿ ಜತೆಗೆ ಇನ್ನೆಷ್ಟು ಸಂಸ್ಕೃತಿಕ ದೌರ್ಜನ್ಯಕ್ಕೆ ನಿಮ್ಮ ಸಹಮತವಿದೆ? ದಸರಾದಲ್ಲಿ ನಾಡದೇವಿ ಚಾಮುಂಡಿ ಹಾಗೂ ಮೈಸೂರು ಒಡೆಯರ್ ಅವರ ವೈಭವವಾಗಬೇಕೇ ವಿನಾಃ ಟಿಪ್ಪು ಸಂಸ್ಕೃತಿಯಲ್ಲ . ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಈ ವಿಚಾರದಲ್ಲಿ ಸೂಕ್ಷ್ಮತೆ ಹಾಗೂ ಜವಾಬ್ದಾರಿಯನ್ನು ಮರೆತಂತೆ ಕಾಣುತ್ತಿದೆ. ವರ್ಷಪೂರ್ತಿ ಕರ್ನಾಟಕ ಸಂಭ್ರಮ ಆಚರಿಸಲು ಹೊರಟವರು ದಸರಾದಲ್ಲಿ ಉರ್ದು ಸಂಭ್ರಮ ನಡೆಸಿದರೆ ಹೇಗೆ.? ಎಂದು ವಿ.ಸುನಿಲ್ ಕುಮಾರ್ ಪ್ರಶ್ನಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.