logo
WhatsApp Image 2026-04-02 at 14.46.04.jpeg
hindalco everlast.jpeg

ಪತ್ನಿಯನ್ನು ಗಂಡ ಪೋಷಕರನ್ನು ನೋಡಿಕೊಳ್ಳುವಂತೆ ಬಲವಂತಪಡಿಸುವಂತಿಲ್ಲ:ಹೈ ಕೋರ್ಟ್ ಮಹತ್ವದ ಆದೇಶ

ಟ್ರೆಂಡಿಂಗ್
share whatsappshare facebookshare telegram
25 Aug 2026
post image

ಬೆಂಗಳೂರು:** ಪತ್ನಿಯನ್ನು ಕೇವಲ ಮನೆಗೆಲಸ ಮಾಡುವಂತೆ ಅಥವಾ ಗಂಡನ ಪೋಷಕರನ್ನು ನೋಡಿಕೊಳ್ಳುವಂತೆ ಬಲವಂತಪಡಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಪತ್ನಿ ಹಾಗೂ ಮಗಳಿಗೆ ಮಾಸಿಕ ₹9 ಸಾವಿರ ಜೀವನಾಂಶ ನೀಡಬೇಕೆಂಬ ಕೌಟುಂಬಿಕ ನ್ಯಾಯಾಲಯದ ಆದೇಶ ಪ್ರಶ್ನಿಸಿ ಪತಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಚಿಲ್ಲಾಕೂರ್ ಸುಮಲತಾ ಅವರ ಏಕಸದಸ್ಯ ಪೀಠ ಈ ತೀರ್ಪು ನೀಡಿದೆ.

ವಿವಾಹವಾದ ಮಹಿಳೆ ಕೇವಲ ಮನೆಗೆಲಸಕ್ಕೆ ಸೀಮಿತವಾಗಿರಬೇಕು ಎಂದು ನಿರೀಕ್ಷಿಸಲು ಸಾಧ್ಯವಿಲ್ಲ. ವೃದ್ಧ ಪೋಷಕರ ಆರೈಕೆ ಅವರ ಮಗ ಅಥವಾ ಮಗಳ ಪ್ರಾಥಮಿಕ ಕರ್ತವ್ಯವಾಗಿದ್ದು, ಅಳಿಯ ಅಥವಾ ಸೊಸೆಯ ಮೇಲೆ ಅದನ್ನು ಕಡ್ಡಾಯವಾಗಿ ಹೇರಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಮಹಿಳೆ ತನ್ನ ತವರು ಮನೆಗೆ ತೆರಳಲು ಗಂಡನ ಮನೆಯಲ್ಲಿರುವ ಪ್ರತಿಯೊಬ್ಬರ ಅನುಮತಿ ಪಡೆಯಬೇಕು ಎಂಬ ನಿರೀಕ್ಷೆಯನ್ನೂ ನ್ಯಾಯಾಲಯ ತಳ್ಳಿಹಾಕಿದೆ. ವಿವಾಹವು ಮತ್ತೊಬ್ಬರ ವೈಯಕ್ತಿಕ ಸ್ವಾತಂತ್ರ್ಯ, ಇಚ್ಛೆ ಮತ್ತು ನಿರ್ಧಾರಗಳನ್ನು ನಿಯಂತ್ರಿಸುವ ಪರವಾನಗಿ ಅಲ್ಲ ಎಂದು ಅಭಿಪ್ರಾಯಪಟ್ಟಿದೆ.

ತನ್ನ ಇಚ್ಛೆಯಂತೆ ತವರು ಮನೆಗೆ ಭೇಟಿ ನೀಡುವ ಹಕ್ಕು ಮಹಿಳೆಗೆ ಇದೆ. ವೃತ್ತಿಜೀವನ ಹಾಗೂ ಆರ್ಥಿಕ ವಿಚಾರಗಳಿಗೆ ಸಂಬಂಧಿಸಿದ ನಿರ್ಧಾರಗಳನ್ನು ತೆಗೆದುಕೊಳ್ಳುವ ಸ್ವಾತಂತ್ರ್ಯವೂ ಆಕೆಗೆ ಇದೆ ಎಂದು ನ್ಯಾಯಾಲಯ ಹೇಳಿದೆ. ಪತ್ನಿಯ ನಿಷ್ಠೆಯನ್ನು ಕೇವಲ ವಿಧೇಯತೆಯ ಆಧಾರದ ಮೇಲೆ ಅಳೆಯಲು ಸಾಧ್ಯವಿಲ್ಲ ಎಂದು ತಿಳಿಸಿದೆ.

ವಿಚಾರಣೆ ವೇಳೆ ಪತಿ, ಪತ್ನಿ ತನ್ನ ಪೋಷಕರನ್ನು ನೋಡಿಕೊಳ್ಳುತ್ತಿರಲಿಲ್ಲ, ಸರಿಯಾಗಿ ಮನೆಗೆಲಸ ಮಾಡುತ್ತಿರಲಿಲ್ಲ ಹಾಗೂ ತನ್ನ ಅನುಮತಿಯಿಲ್ಲದೆ ಹಲವು ಬಾರಿ ತವರು ಮನೆಗೆ ಹೋಗಿದ್ದಳು ಎಂದು ಆರೋಪಿಸಿದ್ದ. ಇದಕ್ಕೆ ಪ್ರತಿಯಾಗಿ ಪತ್ನಿ, ಪತಿಯ ಜೂಜು ಮತ್ತು ಮದ್ಯಪಾನದ ಚಟ ಹಾಗೂ ಆತನ ಕುಟುಂಬಸ್ಥರಿಂದ ದೈಹಿಕ ಮತ್ತು ಮಾನಸಿಕ ಹಿಂಸೆ ಅನುಭವಿಸಿದ್ದಾಗಿ ಆರೋಪಿಸಿದ್ದರು.

ಪತಿಯ ವಾದವನ್ನು ತಳ್ಳಿಹಾಕಿದ ಹೈಕೋರ್ಟ್, ಆತನ ನಡವಳಿಕೆ ಮಾಲೀಕ ಮತ್ತು ನೌಕರನ ನಡುವಿನ ಸಂಬಂಧದಂತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿತು.

ಅಂತಿಮವಾಗಿ ಪತ್ನಿ ಹಾಗೂ ಮಗಳಿಗೆ ಮಾಸಿಕ ₹9 ಸಾವಿರ ಜೀವನಾಂಶ ನೀಡುವಂತೆ ಕೌಟುಂಬಿಕ ನ್ಯಾಯಾಲಯ ನೀಡಿದ್ದ ಆದೇಶವನ್ನು ಎತ್ತಿಹಿಡಿದ ಹೈಕೋರ್ಟ್, ಪತಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿ

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.