


ಬೆಂಗಳೂರು, ಜನವರಿ 05: ಸರ್ಕಾರಿ ಬಸ್ಗಳ ಟಿಕೆಟ್ ದರ ಏರಿಕೆ (Karnataka Bus Ticket Price Hike) ಸಾರ್ವಜನಿಕರ ಜೇಬು ಸುಡುತ್ತಿದೆ. 7 ರೂಪಾಯಿಂದ 115 ರೂ.ವರೆಗೆ ಟಿಕೆಟ್ ದರ ಏರಿಕೆಯಾಗಿದ್ದು, ಜನರ ಜೇಬಿಗೆ ಕತ್ತರಿ ಬಿದ್ದಂತಾಗಿದೆ. ಈ ನಡುವೆ ಆಟೋರಿಕ್ಷಾ (Auto) ಪ್ರಯಾಣ ದರ ಕೂಡ ಏರಿಕೆ ಮಾಡುವಂತೆ ಒತ್ತಡ ಹೇರಲಾಗುತ್ತಿದೆ. ಆಟೋರಿಕ್ಷಾ ಪ್ರಯಾಣ ದರ ಏರಿಕೆ ಮಾಡುವಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಕೆಲ ಆಟೋ ಚಾಲಕ ಸಂಘಟನೆಗಳು ಮನವಿ ಮಾಡಿವೆ.
ಒಂದು ಕಿಲೋಮೀಟರ್ಗೆ 5 ರೂಪಾಯಿ, ಎರಡು ಕಿಲೋಮೀಟರ್ಗೆ 10 ರೂಪಾಯಿ ಏರಿಕೆ ಮಾಡುವಂತೆ ಮಾಡಿವೆ. ಸದ್ಯ ಆಟೋರಿಕ್ಷಾ ಪ್ರಯಾಣ ದರ ಕಿಲೋಮೀಟರ್ಗೆ 30 ರೂಪಾಯಿ ಇದೆ. ಇದೀಗ 40 ರೂಪಾಯಿಗೆ ಏರಿಕೆ ಮಾಡುವಂತೆ ಮನವಿ ಮಾಡಿವೆ. ದರ ಏರಿಕೆ ಸಂಬಂಧ 2024ರ ಡಿಸೆಂಬರ್ 23 ರಂದು ಅಸೋಸಿಯೇಷನ್ಗಳ ಸಭೆ ಕರೆಯಲಾಗಿತ್ತು. ಆದರೆ, ಕಾರಣಾಂತರಗಳಿಂದ ಸಭೆಯನ್ನು ಮುಂದೂಡಲಾಯಿತು. ಈಗ ಮತ್ತೆ ಇದೇ ತಿಂಗಳು ಮೂರನೇ ವಾರದಲ್ಲಿ ಸಭೆ ನಡೆಯಲಿದ್ದು, ಪ್ರಯಾಣ ದರ ಏರಿಕೆ ಬಗ್ಗೆ ತೀರ್ಮಾನ ಆಗಲಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.