



ಕಲಬುರಗಿ: ರಾಜ್ಯದ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿನ ಹಿಜಾಬ್ ನಿಷೇಧವನ್ನು ನಮ್ಮ ಸರ್ಕಾರ ಹಿಂಪಡೆಯಲಿದೆ ಎಂದು ರಾಜ್ಯದ ಏಕೈಕ ಮುಸ್ಲಿಂ ಮಹಿಳಾ ಶಾಸಕಿ ಕನೀಜ್ ಫಾತಿಮಾ ಅವರು ಹೇಳಿದ್ದಾರೆ.
ಕಲಬುರಗಿ ಉತ್ತರದ ಹಾಲಿ ಕಾಂಗ್ರೆಸ್ ಶಾಸಕಿಯಾಗಿದ್ದ ಫಾತಿಮಾ ಅವರು, ಹಿಂದಿನ ಬಿಜೆಪಿ ಸರ್ಕಾರ ಹಿಜಾಬ್ ನಿಷೇಧಿಸಿದ್ದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದರು.
ನಾವು ಮುಂಬರುವ ದಿನಗಳಲ್ಲಿ ಹಿಜಾಬ್ ನಿಷೇಧವನ್ನು ಹಿಂತೆಗೆದುಕೊಳ್ಳುತ್ತೇವೆ ಮತ್ತು ನಾವು ಆ ವಿದ್ಯಾರ್ಥಿನಿಯರಿಗೆ ತರಗತಿಗಳಿಗೆ ಪ್ರವೇಶ ನೀಡುತ್ತೇವೆ. ಅವರು ತಮ್ಮ ಪರೀಕ್ಷೆಗಳಿಗೆ ಹಾಜರಾಗಲು ಸಾಧ್ಯವಾಗುತ್ತದೆ. ಅವರು ಅಮೂಲ್ಯವಾದ ಎರಡು ವರ್ಷಗಳ ಸಮಯವನ್ನು ಕಳೆದುಕೊಂಡಿದ್ದಾರೆ ಎಂದು ಫಾತಿಮಾ ಅವರು ಸ್ಕ್ರೋಲ್‌ಗೆ ತಿಳಿಸಿದ್ದಾರೆ.
ಫಾತಿಮಾ ಅವರು ಬಿಜೆಪಿಯ ಚಂದ್ರಕಾಂತ್ ಪಾಟೀಲ್ ಅವರನ್ನು 2,712 ಮತಗಳಿಂದ ಸೋಲಿಸಿದ್ದಾರೆ. 2018 ರ ಚುನಾವಣೆಯಲ್ಲೂ ಫಾತಿಮಾ ಅವರು ಇದೇ ಚಂದ್ರಕಾಂತ್ ಪಾಟೀಲ್ ಅವರ ವಿರುದ್ಧ ಗೆಲುವು ಸಾಧಿಸಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.