logo
WhatsApp Image 2026-04-02 at 14.46.04.jpeg
hindalco everlast.jpeg

ಅಮಾಸೆಬೈಲು ಗ್ರಾಮದಲ್ಲಿ ಪಕ್ಕಾಸಿಗೆ ನೇಣುಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

ಟ್ರೆಂಡಿಂಗ್
share whatsappshare facebookshare telegram
17 Jun 2022
post image

ಅಮವಾಸೆಬೈಲು: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಮನೆಯ ಬಳಿಯ ಕೊಟ್ಟಿಗೆಯ ಪಕ್ಕಾಸಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಮಾಸೆಬೈಲು ಗ್ರಾಮದ ಗೋಳಿಕಾಡು ಎಂಬಲ್ಲಿ ಜೂ.16ರಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಮೃತರನ್ನು ಗೋಳಿಕಾಡು ನಿವಾಸಿ 58 ವರ್ಷದ ರತಿ ನಾಯ್ಕ್ ಎಂದು ಗುರುತಿಸಲಾಗಿದೆ. ಇವರು ಕೆಲವು ವರ್ಷಗಳಿಂದ ಕೈ ಕಾಲು, ಗಂಟು ನೋವು ಹಾಗೂ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದರು. ಇದೇ ಕಾರಣದಿಂದ ಜೀವನದಲ್ಲಿ ಮನನೊಂದು ಜೂ.15ರ ರಾತ್ರಿ 11ಗಂಟೆಯಿಂದ ಜೂ. 16ರ ಬೆಳಿಗ್ಗೆ 7 ಗಂಟೆಯ ಮಧ್ಯಾವಧಿಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಅಮಾಸೆಬೈಲು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.