logo
WhatsApp Image 2026-04-02 at 14.46.04.jpeg
hindalco everlast.jpeg

ಬಳ್ಕೂರು ಗ್ರಾಮದಲ್ಲಿ ಎದೆನೋವಿನಿಂದ ಮಹಿಳೆ ಸಾವು

ಟ್ರೆಂಡಿಂಗ್
share whatsappshare facebookshare telegram
22 Feb 2022
post image

ಕುಂದಾಪುರ: ಎದೆನೋವು ಕಾಣಿಸಿಕೊಂಡು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಬಳ್ಕೂರು ಗ್ರಾಮದಲ್ಲಿ ನಡೆದಿದೆ. ಬಳ್ಕೂರು ಗ್ರಾಮದ ನಿವಾಸಿ 58 ವರ್ಷದ ಭವಾನಿ ಮೃತ ದುರ್ದೈವಿ. ಇವರು ರಘುಸನ್ ಟೈಲ್ಸ್‌ ಕಾರ್ಖಾನೆಯಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು. ಫೆ. 21ರಂದು ಮಧ್ಯಾಹ್ನ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿರುವಾಗ ಭವಾನಿ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಚಿಕಿತ್ಸೆಗೆ ಕಂಡ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು, ಅಲ್ಲಿ ಪರೀಕ್ಷಿಸಿದ ವೈದ್ಯರು ಭವಾನಿ ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. .

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.