logo
WhatsApp Image 2026-04-02 at 14.46.04.jpeg
hindalco everlast.jpeg

ಮಹಿಳಾ ತರಬೇತಿ ಯೋಜನೆ: ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
9 Nov 2023
post image

ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳಾ ತರಬೇತಿ ಯೋಜನೆಯಡಿ ನಿರುದ್ಯೋಗಿ ಮಹಿಳೆಯರಿಗೆ ವಿವಿಧ ಕೌಶಾಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮಗಳನ್ನು ನೀಡಲು ಅರ್ಹ ಸ್ವಯಂಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಸಂಸ್ಥೆಗಳು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯಲ್ಲಿ ಮತ್ತು ಕೇಂದ್ರ ಸರ್ಕಾರದ ಅಧೀನದಲ್ಲಿ ಅಕ್ರಿಡಿಟೇಶನ್ ಹೊಂದಿರಬೇಕು ಹಾಗೂ ಸಂಸ್ಥೆಯಲ್ಲಿ ಹೊಂದಿರುವ ಮೂಲಭೂತ ಸೌಕರ್ಯಗಳ ವಿವರ, ತರಬೇತಿ ನೀಡುವ ಚಟುವಟಿಕೆಗೆ ಸಂಬಂಧಿಸಿದ ಸ್ಥಳಾವಕಾಶದ ಮಾಹಿತಿ, ಯಂತ್ರೋಪಕರಣಗಳ ವಿವರ, ಛಾಯಾಚಿತ್ರಗಳು ಹಾಗೂ ಸಂಪನ್ಮೂಲ ವ್ಯಕ್ತಿಗಳ ಮಾಹಿತಿಗಳನ್ನು ದ್ವಿ-ಪ್ರತಿಯೊಂದಿಗೆ ನವೆಂಬರ್ 20 ರ ಒಳಗಾಗಿ ಉಪನಿರ್ದೇಶಕರ ಮಹಿಳಾ ಮತ್ತು ಮ್ಕಕಳ ಅಭಿವೃದ್ಧಿ ಇಲಾಖೆ, ಬಿ ಬ್ಲಾಕ್, ಮೊದಲನೇ ಮಹಡಿ, ರೂಂ ನಂ:204, ರಜತಾದ್ರಿ, ಮಣಿಪಾಲ ಇಲ್ಲಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2574978 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.