logo
WhatsApp Image 2026-04-02 at 14.46.04.jpeg
hindalco everlast.jpeg

ಮಲ್ಪೆ ಬಂದರಿನ ದಕ್ಕೆ ನೀರಿಗೆ ಬಿದ್ದು ಕಾರ್ಮಿಕ ಸಾವು

ಟ್ರೆಂಡಿಂಗ್
share whatsappshare facebookshare telegram
15 Feb 2022
post image

ಉಡುಪಿ: ಮಲ್ಪೆ ಬಂದರಿನ ದಕ್ಕೆಯ ನೀರಿಗೆ ಬಿದ್ದು ಕಾರ್ಮಿಕನೋರ್ವ ಮೃತಪಟ್ಟ ಘಟನೆ ಭಾನುವಾರ ಸಂಜೆ ನಡೆದಿದೆ.

ಮಹಾರಾಷ್ಟ್ರ ರತ್ನಗಿರಿಯ ನಿವಾಸಿ ನಿತಿನ್ ಮೃತಪಟ್ಟ ಕಾರ್ಮಿಕ. ಈತ ಇತರ ಇಬ್ಬರು ಕಾರ್ಮಿಕರೊಂದಿಗೆ ಮಲ್ಪೆ ಬಂದರಿನಲ್ಲಿ ನಾಗಾರ್ಜುನ ಕಂಪೆನಿಯ ಪೈಪ್ ಲೈನ್ ಕಾಮಗಾರಿಯ ಕೆಲಸ ಮಾಡುತ್ತಿದ್ದನು. ಈ ವೇಳೆ ಆಕಸ್ಮಿಕವಾಗಿ ದಕ್ಕೆಯ ನೀರಿಗೆ ಬಿದ್ದು ಕಣ್ಮರೆಯಾಗಿದ್ದನು.

ಮಾಹಿತಿ ತಿಳಿದು ಕೂಡಲೇ ಸ್ಥಳಕ್ಕೆ ಧಾವಿಸಿದ ಮುಳುಗು ತಜ್ಞ ಈಶ್ವರ್ ಮಲ್ಪೆ ಅವರು, ನಿನ್ನೆ ತಡರಾತ್ರಿ 12 ಗಂಟೆಯವರೆಗೆ ಶೋಧಕಾರ್ಯ ನಡೆಸಿದ್ದರು. ಆದರೆ ಮೃತದೇಹ ಪತ್ತೆಯಾಗಿರಲಿಲ್ಲ.

ಹೀಗಾಗಿ ಇಂದು ಬೆಳಿಗ್ಗೆ ಮತ್ತೆ ಶೋಧ ಕಾರ್ಯ ಮುಂದುವರಿಸಲಾಗಿತ್ತು. ವ್ಯಕ್ತಿ ಬಿದ್ದು ಜಾಗದಿಂದ ಸ್ವಲ್ಪ ದೂರದಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.