



ಕಾರ್ಕಳ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ತಾಲೂಕು ಆರೋಗ್ಯಾಧಿಕಾರಿ ಕಛೇರಿ ಕಾರ್ಕಳ, ತಾಲೂಕು ಕಾನೂನು ಸೇವೆಗಳ ಸಮಿತಿ ಕಾರ್ಕಳ, ನ್ಯಾಯವಾದಿಗಳ ಸಂಘ ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಮತ್ತು ವಿಶ್ವ ಸ್ಕಿಜೋಫ್ರೇನಿಯಾ ದಿನಾಚರಣೆ ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಕಛೇರಿ ಸಭಾಂಗಣ ಕಾರ್ಕಳ ಇಲ್ಲಿ ಆಯೋಜಿಸಲಾಯಿತು. ಇಲ್ಲಿ ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಚೇತನಾ ಎಸ್.ಎಪ್ ಉದ್ಘಾಟಿಸಿ ತಂಬಾಕು ಉತ್ಪನ್ನಗಳ ಸೇವನೆ ದುಷ್ಪರಿಣಾಮಗಳು, ಅವುಗಳ ನಿಷೇದ ಕುರಿತಾದ ಕನೂನು ಮತ್ತು ಸೇವಾ ಸೌಲಭ್ಯಗಳು ಲೋಕಾದಲತ್ ಕುರಿತಾದ ಮಾಹಿತಿ ನೀಡಿದರು. ಮಾಹಿತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ನ್ಯಾಉವಾದಿಗಳ ಸಂಘದ ಅಧ್ಯಕ್ಷರಾದ ಸುನೀಲ್ ಕುಮಾರ್ ಶೆಟ್ಟಿ ಮಾತನಾಡಿ ತಂಬಾಕು ದುಷ್ಪರಿಣಾಗಳನ್ನು ಅರಿತು ಸಮುದಾಯದಲ್ಲಿ ಜಾಗೃತಿ ಮೂಡಿಸಿ ಕಾಯಿಲೆಗಳಿಂದ ದೂರವಿರಿಸಲು ನರ್ಸಿಂಗ್ ವಿದ್ಯಾರ್ಥಿಗಳು ಕೈ ಜೋಡಿಸಲು ಕರೆ ನೀಡಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಬಾಗವಹಿಸಿದ ತಾಲೂಕು ಆರೋಗ್ಯಧಿಕಾರಿಗಳಾದ ಡಾ. ಕೃಷ್ಣಾನಂದ ಶೆಟ್ಟಿ ಇವರು ತಂಬಾಕು ಸೇವನೆಯ ದುಷ್ಪರಿಣಾಮಗಳು, ಕೊಟ್ಪಾ ಕಾಯಿದೆ, ಹದಿಹರೆಯದವರು ತಂಬಾಕು ಸೇವನೆಗೆ ದಾಸರಾಗಿ ಜೀವನದಲ್ಲಿ ಎದುರಿಸುವ ಸಂಕಷ್ಟಗಳು ಹಾಗೂ ಇದನ್ನು ತಡೆಯುವುದು ಜಾಗೃತಿಯಿಂದ ಮಾತ್ರ ಸಾಧ್ಯ ಎಂದರು. ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಆಪ್ತ ಅಮಾಲೋಚಕರಾದ ಕ್ಯಾತರೀನ್ ಜೆನಿಫರ್ ಇವರು ಸ್ಕಿಜೋಫ್ರೇನಿಯಾ ಕಾಯಿಲೆಯ ಲಕ್ಷಣಗಳು, ಪರಿಹಾರೋಪಾಯಗಳು ಮತ್ತು ಚಿಕಿತ್ಸೆ ಕುರಿತಾಗಿ ಮಾಹಿತಿ ನೀಡಿದರು. ಮುಖ್ಯ ಅಥಿತಿಗಳಾದ ಸಹಾಯಕ ಸರ್ಕಾರಿ ಅಭಿಯೋಜಕರು ಹಾಗೂ ಕಾರ್ಯನಿರ್ವಾಹಕ ಸದಸ್ಯ ಕಾರ್ಯದರ್ಶಿ ತಾಲೂಕು ಕಾನೂನು ಸೇವೆಗಳ ಸಮಿತಿ ಕಾರ್ಕಳ ಶೋಭಾ ನಾಯಕ್ ಮಾತನಾಡಿ ಕನೂನು ಸೇವಾ ಸೌಲಭ್ಯಗಳು, ಅವುಗಳ ಸದುಪಯೋಗ ಪಡೆಯುವ ಬಗ್ಗೆ, ಕನೂನುಗಳ ಅನುಷ್ಠಾನದಿಂದ ಸಮಾಜದಲ್ಲಿ ಸೌಹಾರ್ದತೆ ಹಾಗೂ ಆರೋಗ್ಯ ಕಪಾಡುವ ಬಗ್ಗೆ ವಿವರಿಸಿದರು. ಕಾರ್ಯಕ್ರಮದಲ್ಲಿ ಸರಕಾರಿ ನರ್ಸಿಂಗ್ ಕಾಲೇಜು ಕಾರ್ಕಳ ಇದರ ಪ್ರಾಂಶುಪಾಲರಾದ ಸಜನಿ ಸುಬ್ರಮಣ್ಯ, ಉಪನ್ಯಾಸಕರಾದ ದಿವ್ಯಶ್ರೀ ಪಾಟೀಲ್, ಆಶಾಕಾರ್ಯಕರ್ತೆಯರು, ಸರಕಾರಿ ನರ್ಸಿಂಗ್ ಕಾಲೇಜು ಕಾರ್ಕಳ ಇಲ್ಲಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ವಸಂತ್ ಶೆಟ್ಟಿ ಸ್ವಾಗತಿಸಿ, ಹಿರಿಯ ಪ್ರಥಮಿಕ ಆರೋಗ್ಯ ಸುರಕ್ಷಾಧಿಕಾರಿಯಾದ ಅರುಣ ಪಿ. ವಂದಿಸಿ, ಪ್ರಭಾರ ಜಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಶಶಿಧರ್ ಹೆಚ್. ನಿರೂಪಿಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.