logo
WhatsApp Image 2026-04-02 at 14.46.04.jpeg
hindalco everlast.jpeg

ವಿಶ್ವ ಹಿರಿಯ ನಾಗರಿಕರ ದಿನಾಚರಣೆ

ಟ್ರೆಂಡಿಂಗ್
share whatsappshare facebookshare telegram
28 Sept 2023
post image

ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ (ರಿ), ಹಿರಿಯ ನಾಗರಿಕರ ಸಂಸ್ಥೆಗಳು, ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ (ರಿ) ಹಾಗೂ ವೃದ್ಧಾಶ್ರಮಗಳು ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವು ಅ. 1 ರಂದು ಬೆಳಗ್ಗೆ 10 ಗಂಟೆಗೆ ನಗರದ ಬನ್ನಂಜೆ ಶ್ರೀ ನಾರಾಯಣ ಗುರು ಆಡಿಟೋರಿಯಂನಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಂಗವಾಗಿ ಅಂದು ಬೆಳಗ್ಗೆ 9 ಗಂಟೆಯಿಂದ ಹಿರಿಯ ನಾಗರಿಕರಿಗೆ ಉಚಿತ ಕಣ್ಣಿನ ತಪಾಸಣೆ, ಬಿ.ಪಿ ಹಾಗೂ ಶುಗರ್ ತಪಾಸಣೆ ನಡೆಸಲಾಗುವುದು. ಕಾರ್ಯಕ್ರಮವನ್ನು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಆರ್. ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.

ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ, ಸಂಸದ ಬಿ.ವೈ.ರಾಘವೇಂದ್ರ, ಶಾಸಕರುಗಳಾದ ವಿ ಸುನಿಲ್ ಕುಮಾರ್, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಕೋಟ ಶ್ರೀನಿವಾಸ ಪೂಜಾರಿ, ಎಸ್.ಎಲ್.ಭೋಜೆಗೌಡ, ಡಾ.ತೇಜಸ್ವಿನಿ ಗೌಡ ಹಾಗೂ ಮಂಜುನಾಥ ಭಂಡಾರಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ಟಿ ರೇಜು, ಮಣಿಪಾಲ ಕೆನರಾ ಬ್ಯಾಂಕ್ ವೃತ್ತ ಕಚೇರಿಯ ಮಹಾಪ್ರಬಂಧಕ ಪಂಡಿತ್ ಜಿ, ಹಿರಿಯ ನಾಗರಿಕರ ಜಿಲ್ಲಾ ಒಕ್ಕೂಟದ ಅಧ್ಯಕ್ಷ ಸಿ.ಎಸ್ ರಾವ್ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.