



...ಓಸ್ಲೋ: ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಪದಕ ಗೆದ್ದ ಮೊದಲ ಭಾರತೀಯ ಮಹಿಳೆಯಾಗಿ ಕುಸ್ತಿಪಟು ಅಂಶು ಮಲಿಕ್ ಹೊರಹೊಮ್ಮಿದ್ದಾರೆ. ನಾರ್ವೆಯ ಓಸ್ಲೋದಲ್ಲಿ ಗುರುವಾರ ನಡೆದ 57 ಕೆಜಿ ವಿಭಾಗದ ಫೈನಲ್ ಪಂದ್ಯದಲ್ಲಿ 2016ರ ಒಲಿಂಪಿಕ್ ಚಾಂಪಿಯನ್ ಹೆಲೆನ್ ಲೌಸಿ ಮಾರೌಲಿ ವಿರುದ್ಧ ಸೋಲುವ ಮೂಲಕ ಅಂಶು ಮಲಿಕ್ ಬೆಳ್ಳಿ ಪದಕಕ್ಕೆ ಮುತ್ತಿಕ್ಕಿದರು. ಮೌರೌಲಿ ತನ್ನ ತೋಳಿತ ಹಿಡಿತದಲ್ಲಿ ಅಂಶು ಮಲ್ಲಿಕ್ ಅವರನ್ನು ಪಡೆದು 2-1 ಅಂತರದಲ್ಲಿ ಮುನ್ನಡೆ ಸಾಧಿಸಿದಳು. ತದನಂತರ ಅಂಶುವಿನ ಬಲಗೈಯನ್ನು ಬಿಗಿಯಾಗಿ ಹಿಡಿದುಕೊಂಡು 4-1 ಅಂಕ ಪಡೆದುಕೊಳ್ಳುವುದರೊಂದಿಗೆ ಗೆಲುವು ಸಾಧಿಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.