logo
WhatsApp Image 2026-04-02 at 14.46.04.jpeg
hindalco everlast.jpeg

3ನೇ ಅವಧಿಗೆ ಚೀನಾದ ಅಧ್ಯಕ್ಷನಾಗಿ ಕ್ಸಿ ಜಿನ್‌ಪಿಂಗ್ ಆಯ್ಕೆ

ದೇಶ-ವಿದೇಶ
share whatsappshare facebookshare telegram
10 Mar 2023
post image

ಬೀಜಿಂಗ್: ಚೀನಾದ ಅಧ್ಯಕ್ಷನಾಗಿ ಕ್ಸಿ ಜಿನ್‌ಪಿಂಗ್ 3ನೇ ಅವಧಿಗೆ ಮತ್ತೆ ಆಯ್ಕೆಯಾಗಿದ್ದು, ಈ ಮೂಲಕ ಅವರು ದಾಖಲೆ ಸೃಷ್ಟಿಸಿದ್ದಾರೆ.

ಸಂಸತ್ತಿನ ಸುಮಾರು 3,000 ಸದಸ್ಯರು ನ್ಯಾಷನಲ್ ಪೀಪಲ್ಸ್ ಕಾಂಗ್ರೆಸ್‌ನ ಜಿನ್‌ಪಿಂಗ್‌ಗೆ ಚೀನಾದ ಅಧ್ಯಕ್ಷರಾಗಲು ಸರ್ವಾನುಮತದಿಂದ ಮತ ಹಾಕಿದ್ದಾರೆ. ಚುನಾವಣೆಯಲ್ಲಿ ಕ್ಸಿಗೆ ಪ್ರತಿಸ್ಪರ್ಧಿಯಾಗಿ ಯಾವುದೇ ಅಭ್ಯರ್ಥಿ ಇರಲಿಲ್ಲ ಎಂದು ವರದಿಗಳು ತಿಳಿಸಿವೆ. ಚೀನಾದ ಹೊಸ ಸಂಸತ್ತಿನ ಅಧ್ಯಕ್ಷರಾಗಿ ಝಾವೊ ಲೆಜಿ ಮತ್ತು ಹೊಸ ಉಪಾಧ್ಯಕ್ಷರಾಗಿ ಹಾನ್ ಝೆಂಗ್ ಅವರನ್ನು ಆಯ್ಕೆ ಮಾಡಲಾಗಿದೆ. ಅವರಿಬ್ಬರೂ ಕ್ಸಿ ಅವರ ಹಿಂದಿನ ಪಾಲಿಟ್‌ಬ್ಯುರೊ ಸ್ಥಾಯಿ ಸಮಿತಿಯ ಪಕ್ಷದ ನಾಯಕರ ತಂಡದಲ್ಲಿದ್ದರು ಎನ್ನಲಾಗಿದೆ.

ಕಳೆದ ವರ್ಷ ಅಕ್ಟೋಬರ್‌ನಲ್ಲಿ, ಕ್ಸಿ ಜಿನ್‌ಪಿಂಗ್ ಅವರು ಕಮ್ಯುನಿಸ್ಟ್ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ 3ನೇ ಬಾರಿ 5 ವರ್ಷಗಳ ಅವಧಿಗೆ ಮರು ಆಯ್ಕೆಯಾಗಿದ್ದು, ಈ ಮೂಲಕ ದಾಖಲೆ ಸೃಷ್ಟಿಸಿದ್ದರು. ಇದೀಗ ಕ್ಸಿ ಅವರು ಮಾವೋ ಝೆಡಾಂಗ್ ನಂತರ ದೇಶದ ಅತ್ಯಂತ ಶಕ್ತಿಶಾಲಿ ನಾಯಕರಾಗಿ ತಮ್ಮ ಹಿಡಿತವನ್ನು ಬಿಗಿಗೊಳಿಸುತ್ತಿದ್ದಾರೆ. 

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.