



ಉಡುಪಿ: ಕರ್ನಾಟಕ ಯಕ್ಷಗಾನ ಅಕಾಡೆಮಿಯ ವತಿಯಿಂದ ಯಕ್ಷಗಾನ (ತೆಂಕು, ಬಡಗು, ಬಡಾಬಡಗು, ಯಕ್ಷಗಾನ ಗೊಂಬೆಯಾಟ), ಮೂಡಲಪಾಯ, ಕೇಳಿಕೆ, ಘಟ್ಟದಕೋರೆ ಮತ್ತು ತಾಳಮದ್ದಲೆ ಇತ್ಯಾದಿ ಕಲಾಪ್ರಕಾರಗಳಲ್ಲಿ 2021 ನೇ ಸಾಲಿನ ಜನವರಿ ಯಿಂದ ಡಿಸೆಂಬರ್ ಅವಧಿಯಲ್ಲಿ ಪ್ರಕಟಿಸಿರುವ ಪುಸ್ತಕಗಳಿಗೆ ಬಹುಮಾನ ನೀಡಲು ಲೇಖಕ ಹಾಗೂ ಪ್ರಕಾಶಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯೊಂದಿಗೆ ಪುಸ್ತಕಗಳ 4 ಪ್ರತಿಗಳನ್ನು ರಿಜಿಸ್ಟ್ರಾರ್ ಕರ್ನಾಟಕ ಯಕ್ಷಗಾನ ಅಕಾಡೆಮಿ, ಕನ್ನಡ ಭವನ, ಎರಡನೇ ಮಹಡಿ, ಚಾಲುಕ್ಯ ವಿಭಾಗ, ಜೆ.ಸಿ.ರಸ್ತೆ, ಬೆಂಗಳೂರು ಇವರಿಗೆ ಸಲ್ಲಿಸಲು ಫೆ. 23 ಕೊನೆಯ ದಿನ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ದೂ.ಸಂಖ್ಯೆ: 080-22113146 ಅನ್ನು ಸಂಪರ್ಕಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.