logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಜೂನ್ 15ರಂದು ಕೃಷ್ಣಮಠದ ರಾಜಾಂಗಣದಲ್ಲಿ ಯಕ್ಷಗಾನ ಸಪ್ತಾಹ ಹಾಗೂ ಅಷ್ಟಾವಧಾನ ಕಾರ್ಯಕ್ರಮ

ಟ್ರೆಂಡಿಂಗ್
share whatsappshare facebookshare telegram
12 Jun 2025
post image

ಉಡುಪಿ: ಪಣಂಬೂರು ವೆಂಕಟ್ರಾಯ ಐತಾಳ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ನಡೆಯುತ್ತಿರುವ ಉಚಿತ ತೆಂಕುತಿಟ್ಟು ಯಕ್ಷಗಾನ ತರಗತಿಯು ಶ್ರೀ ಸೋದೆ ಮಠದ ಯತಿಗಳ ಕೃಪಾಶೀರ್ವಾದದಿಂದ ಯಶಸ್ವಿಯಾಗಿ ಎಂಟು ಸಂವತ್ಸರಗಳನ್ನು ಪೂರೈಸಿದೆ. ಇದರ 8ನೇ ವರ್ಷದ ವಾರ್ಷಿಕೋತ್ಸವ ಮತ್ತು ಪಣಂಬೂರು ವೆಂಕಟ್ರಾಯ ಐತಾಳ ಸಂಸ್ಮರಣಾ ಯಕ್ಷಗಾನ ಸಪ್ತಾಹ ಹಾಗೂ ಅಷ್ಟಾವಧಾನ ಕಾರ್ಯಕ್ರಮವು ಜೂನ್ 15 ರಂದು ಆದಿತ್ಯವಾರ ಮಧ್ಯಾಹ್ನ 2.30ಕ್ಕೆ ಉಡುಪಿ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿದೆ. ಉದ್ಘಾಟನಾ ಕಾರ್ಯಕ್ರಮ ಸಂಜೆ 5. 30 ಗಂಟೆಗೆ ಜರುಗಲಿದೆ.

ಈ ಪ್ರಯುಕ್ತ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು, ಶ್ರೀ ಸುಶೀಂದ್ರ ತೀರ್ಥ ಶ್ರೀಪಾದರು ಮತ್ತು ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮವು ಜರುಗಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕಟೀಲು ಕ್ಷೇತ್ರದ ಅನುವಂಶಿಕ ಅರ್ಚಕ ಲಕ್ಷ್ಮೀನಾರಾಯಣ ಅಸ್ರಣ್ಣ, ಹಿರಿಯ ಯಕ್ಷಗಾನ ಚಿಂತಕರ ಎಂ ಪ್ರಭಾಕರ ಜೋಶಿ, ಅಷ್ಟಾವಧಾನಿಗಳಾದ ಡಾ ರಾಮಕೃಷ್ಣ ಪೆಜತ್ತಾಯ ಬಾಳ, ಯಕ್ಷಗಾನ ಕಲಾರಂಗದ ಅಧ್ಯಕ್ಷ ಗಂಗಾಧರ ರಾವ್ , ಯಕ್ಷಾನಂದನ, ಪಣಂಬೂರು ಇದರ ಸಂಚಾಲಕ ಸಂತೋಷ್ ಐತಾಳ್, ಕರ್ನಾಟಕ ಬ್ಯಾಂಕ್ ಡಿ ಜಿ ಎಂ ವಸಂತ್ ಹೇರಳೆ ಭಾಗವಹಿಸಲಿದ್ದಾರೆ. ಹಿರಿಯ ಯಕ್ಷಗಾನ ಕಲಾವಿದ ಕೆ ಗೋವಿಂದ ಭಟ್, ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿಯ ಮಾಜಿ ಅಧ್ಯಕ್ಷ ಪ್ರೊ|| ಎಂ ಎಲ್ ಸಾಮಗ, ಹಿರಿಯ ಯಕ್ಷಗಾನ ಭಾಗವತ ಕುರಿಯ ಗಣಪತಿ ಶಾಸ್ತ್ರಿ, ಹಿರಿಯ ಭಾಗವತ ಪೊಲ್ಯ ಲಕ್ಷ್ಮೀನಾರಾಯಣ ಶೆಟ್ಟಿ ಮತ್ತು ಹಿರಿಯ ಯಕ್ಷಗಾನ ಹಿಮ್ಮೇಳ ಕಲಾವಿದರಾದ ಪದ್ಯಾಣ ಶಂಕರನಾರಾಯಣ ಭಟ್ ಇವರು ಗೌರವ ಸಂಮಾನಗೊಳ್ಳಲಿದ್ದಾರೆ. ಪಣಂಬೂರು ವೆಂಕಟ್ರಾಯ ಐತಾಳ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷೆ ಶ್ರೀಮತಿ ಗೋಪಿಕಾ ಮಯ್ಯ ಸದಸ್ಯರಾದ ಸತೀಶ್ ಮಯ್ಯ, ಸಿರಿಬಾಗಿಲು ರಾಮಕೃಷ್ಣ ಮಯ್ಯ ಹಾಗೂ ಯಕ್ಷ ಗುರು ಶ್ರೀ ರಾಕೇಶ್ ರೈ ಅಡ್ಕ ಉಪಸ್ಥಿತರಿರುವರು.

ತದನಂತರ ತೆಂಕುತಿಟ್ಟು ಹಿರಿಯ ಅತಿಥಿ ಕಲಾವಿದರಿಂದ ತಾಮ್ರ ಧ್ವಜ ಕಾಳಗ ಯಕ್ಷಗಾನ ಪ್ರದರ್ಶನ ನಡೆಯಲಿದೆ. ಪ್ರತೀ ದಿನ ಸಂಜೆ 7ರಿಂದ ಪಣಂಬೂರು ವೆಂಕಟ್ರಾಯ ಐತಾಳ ಸಾಂಸ್ಕೃತಿಕ ಪ್ರತಿಷ್ಠಾನದ ವಿದ್ಯಾರ್ಥಿಗಳ ನಿರ್ದೇಶನದಲ್ಲಿ ಯಕ್ಷಗಾನ ಪ್ರದರ್ಶನ ನಡೆಯಲಿದೆ.

ಸುದ್ದಿಗೋಷ್ಠಿಯಲ್ಲಿ ಡಾ.ಸುನಿಲ್ ಮುಂಡ್ಕೂರು, ರಾಕೇಶ್ ರೈ ಅಡ್ಕ ,ಮೋಹನ್ ಶೆಟ್ಟಿ, ಗೋಪಿಕಾ ಮಯ್ಯ,ಶಶಿಕಾಂತ್ ಭಟ್ ,ರವಿನಂದನ್ ಭಟ್ ಉಪಸ್ಥಿತರಿದ್ದರು.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.