



ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ, ಉಡುಪಿ ತಾಲೂಕು ಘಟಕದಿಂದ ನೀಡುವ ಯಕ್ಷ ಪ್ರೇಮಿ ಶ್ರೀ ನಾರಾಯಣ ಸ್ಮರಣಾರ್ಥ ದತ್ತಿ ಪುರಸ್ಕಾರವನ್ನು ಈ ಬಾರಿ ಉಡುಪಿಯ ಹಿರಿಯ ಯಕ್ಷಗಾನ ಕಲಾವಿದರಾದ ದೇವದಾಸ್ ರಾವ್ ಕೂಡ್ಲಿ ಅವರಿಗೆ ನೀಡಲಾಗುವುದು . ದೇವದಾಸ್ ಅವರು ಯಕ್ಷಗಾನ ಕೇಂದ್ರ ಉಡುಪಿಯ ಗುರುಗಳಾಗಿ ಸೇವೆ ಸಲ್ಲಿಸಿರುತ್ತಾರೆ ಹಾಗೂ ದೇಶ ವಿದೇಶಗಳಲ್ಲಿ ಹಲವು ಯಕ್ಷಗಾನ ಕಾರ್ಯಕ್ರಮಗಳಲ್ಲಿ ಮದ್ದಲೆ ವಾದಕರಾಗಿ, ಕಲಾವಿದರಾಗಿ ಸೇವೆಸಲ್ಲಿಸಿರುತ್ತಾರೆ.
ಮೇ ಐದರಂದು ನಡೆಯಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನ ದಿನಾಚರಣೆಯ ಸಂದರ್ಭದಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುವುದು ಎಂದು ಉಡುಪಿ ತಾಲೂಕು ಘಟಕದ ಗೌರವ ಕಾರ್ಯದರ್ಶಿ ಜನಾರ್ದನ ಕೊಡವೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.