

ಬೆಂಗಳೂರು:** ರಾಜ್ಯದಲ್ಲಿ ಮಳೆ ಚುರುಕುಗೊಂಡಿದ್ದು, ಕಳೆದ ಕೆಲ ದಿನಗಳಿಂದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಅದರಲ್ಲೂ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿದ್ದು, ಜನಜೀವನದ ಮೇಲೂ ಪರಿಣಾಮ ಬೀರುತ್ತಿದೆ. ಈ ನಡುವೆ ರಾಜ್ಯ ಹವಾಮಾನ ಇಲಾಖೆ ಮತ್ತೆ ಮಳೆ ಮುನ್ಸೂಚನೆ ನೀಡಿದೆ.
ಜೂನ್ ಹಾಗೂ ಜುಲೈ ತಿಂಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದೆ ಕಂಗಾಲಾಗಿದ್ದ ರೈತರಿಗೆ ಇದೀಗ ವರುಣನ ಆಗಮನ ಕೊಂಚ ನೆಮ್ಮದಿ ತಂದಿದೆ. ರಾಜ್ಯದ ಹಲವು ಜಲಾಶಯಗಳಿಗೆ ಒಳಹರಿವು ಹೆಚ್ಚಾಗುತ್ತಿದ್ದು, ರೈತರಲ್ಲಿ ಆಶಾಭಾವನೆ ಮೂಡಿದೆ.
ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆಯ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಈ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳ ಜನರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.