



ಕಾರ್ಕಳ: ಜಿಲ್ಲಾಡಳಿತ & ಜಿಲ್ಲಾ ಪಂಚಾಯತ್ ಉಡುಪಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾಲೂಕು ಪಂಚಾಯತ್, ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವು ಸೆ.15 ರಂದು ಉಡುಪಿ ಜಿಲ್ಲಾ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣ ಅಜ್ಜರಕಾಡು, ಉಡುಪಿಯಲ್ಲಿ ನಡೆಯಿತು.
ಆರ್ಟಿಸ್ಟಿಕ್ ಯೋಗಾಸನ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಕುಮಾರಿ ಅನ್ವಿ ಎಚ್ ಅಂಚನ್ ಪ್ರಥಮ ಸ್ಥಾನ ಪಡೆದು, ರಾಜ್ಯ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ.
ಕುಮಾರಿ ಅನ್ವಿ ಎಚ್ ಅಂಚನ್ ಇವರು ಕಾರ್ಕಳದ ಶ್ರೀ ಹರೀಶ್ ಹಾಗೂ ಶ್ರೀಮತಿ ಶೋಭಾ ದಂಪತಿಯ ಸುಪುತ್ರಿಯಾಗಿದ್ದಾರೆ.
ಸಾಧಕ ವಿದ್ಯಾರ್ಥಿನಿಗೆ ಅಜೆಕಾರು ಪದ್ಮಗೋಪಾಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ, ಕಾರ್ಕಳ ಜ್ಞಾನಸುಧಾ ಸಂಸ್ಥೆಯ ಸಿ.ಇ.ಒ ಹಾಗೂ ಕಾರ್ಕಳ ಜ್ಞಾನಸುಧಾ ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ದಿನೇಶ್. ಎಂ. ಕೊಡವೂರು ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ಉಷಾ.ರಾವ್.ಯು, ಉಪ ಪ್ರಾಂಶುಪಾಲರಾದ ಶ್ರೀಮತಿ ವಾಣ . ಕೆ ಮತ್ತು ಶಿಕ್ಷಕ ವೃಂದದವರು ಹಾಗೂ ಪೋಷಕರು ಅಭಿನಂದಿಸಿ, ಶುಭ ಹಾರೈಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.