



ಉಡುಪಿ : ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ಗೋವಾ ಜಿಲ್ಲಾ ಘಟಕ, ಸಾಲಸೇಟ ತಾಲೂಕಾ ಘಟಕ, ಹಾಗೂ ಸ್ನೇಹಯುವ ಸಾಂಸ್ಕೃತಿಕ ಸಂಘ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಭಾನುವಾರ ಮಡಗಾಂವ ಲಕ್ಷ್ಮೀ ಎಂಟರ್‍ಪ್ರೈಸಸ್ ಹೋಟೆಲ್‍ನಲ್ಲಿ ಆಯೋಜಿಸಿದ್ದ “ಕಲಾ ಸಂಗಮ ಗೋವಾ” ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ ಕಾರ್ಕಳದ ಯೋಗಪಟು ಕುಮಾರಿ ಕವನ ಆಚಾರ್ಯ ಇವರಿಗೆ ರಾಷ್ಟ್ರೀಯ ಯೋಗ ರತ್ನ ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಲಾಯಿತು.
ಗೋವಾದ ಮಾಜಿ ಮುಖ್ಯಮಂತ್ರಿ ದಿಗಂಬರ್ ಕಾಮತ್, ಕಸಾಪ ಗೋವಾ ರಾಜ್ಯಾಧ್ಯಕ್ಷ ಡಾ.ಸಿದ್ಧಣ್ಣ ಮೇಟಿ, ಕರ್ನಾಟಕದ ಸಾರ್ವಜನಿಕ ಗೃಂಥಾಲಯ ಇಲಾಖೆಯ ನಿರ್ದೇಶಕ ಸತೀಶಕುಮಾರ ಹೊಸ್ಮನಿ, ಕಸಾಪ ಗೋವಾ ರಾಜ್ಯ ಗೌ.ಕಾರ್ಯದರ್ಶಿ ನಾಗರಾಜ ಗೋಂದಕರ್, ಕಸಾಪ ದಕ್ಷಿಣ ಗೋವಾ ಜಿಲ್ಲಾಧ್ಯಕ್ಷ ಪರಶುರಾಮ ಕಲಿವಾಳ, ಸಾಲಸೇಟ ತಾಲೂಕಾ ಅಧ್ಯಕ್ಷ ಬಸವರಾಜ ಬನ್ನಿಕೊಪ್ಪ, ಚಿತ್ರನಟಿ ಮೀನಾ, ಹಿರಿಯ ಪತ್ರಕರ್ತ ರಹಮತ್ ಕಂಚಗಾರ, ಜುವಾರಿನಗರ ಕನ್ನಡ ಸಂಘದ ಅಧ್ಯಕ್ಷ ಶಿವಾನಂದ ಬಿಂಗಿ, ಹಿರೀಯ ಪತ್ರಕರ್ತ ಮಾರುತಿ ಬಡಿಗೇರ, ಸ್ನೇಹಯುವ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಎಂ.ರಂಜಿತಕುಮಾರ್, ಮತ್ತಿತರರು ಉಪಸ್ಥಿತರಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.