



ಉಡುಪಿ:
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಜ. 12ರಂದು ಉಡುಪಿಗೆ ಆಗಮಿಸಲಿದ್ದಾರೆ. ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಸ್ವಾಮಿ ವಿವೇಕಾನಂದ ಜನ್ಮದಿನಾಚರಣೆ ಅಂಗವಾಗಿ ಉಡುಪಿಯಲ್ಲಿ ಜ.12ರಂದು ಹಮ್ಮಿಕೊಂಡಿರುವ ರಾಜ್ಯ ಮಟ್ಟದ 'ಯುವ ಸಂಗಮ'ದಲ್ಲಿ ಯೋಗಿ ಆದಿತ್ಯನಾಥ್ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಬಿಜೆಪಿ ಯುವ ಮೋರ್ಚಾದ ಸಮ್ಮಿಲನದೊಂದಿಗೆ ನಡೆಯಲಿರುವ ಈ ಬೃಹತ್ ಸಮಾವೇಶದಲ್ಲಿ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಿಂದ ಸುಮಾರು 2 ಲಕ್ಷಕ್ಕೂ ಮಿಕ್ಕಿ ಯುವ ಮೋರ್ಚಾ ಪ್ರತಿನಿಧಿಗಳು ಮತ್ತು ಯುವ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸುವ ಗುರಿಯೊಂದಿಗೆ ರಾಜ್ಯದಲ್ಲಿ ಮತ್ತೆ ಬಿಜೆಪಿ ನೇತೃತ್ವದ ಸರಕಾರ ರಚಿಸುವಲ್ಲಿ ಯುವ ಮೋರ್ಚಾ ಪ್ರಮುಖ ಪಾತ್ರ ವಹಿಸಲಿದೆ ಎಂದು ಅವರು ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.