



ನವದೆಹಲಿ: ಯುವಕನೊಬ್ಬ ಕಾರಿನೊಳಗೆ ಇಬ್ಬರು ಯುವತಿಯರ ಜೊತೆ ಸರಸ ಸಲ್ಲಾಪದಲ್ಲಿ ತೊಡಗಿರುವ ವಿಡಿಯೋವೊಂದು ಸೋಷಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗಿದ್ದು, ನಿಶಾಂತ್ ಶರ್ಮಾ (ಭಾರದ್ವಾಜ್) ಎಂಬ ಬಳಕೆದಾರ ಎಕ್ಸ್ ನಲ್ಲಿ ಈ ವಿಡಿಯೋ ಶೇರ್ ಮಾಡಿಕೊಂಡಿದ್ದಾರೆ.
ಉತ್ತರ ಪ್ರದೇಶದ ಬಾರಾಬಂಕಿ ಪ್ರದೇಶದ ಲಕ್ನೋ–ಅಯೋಧ್ಯೆ ಎನ್ ಎಚ್ 27 ರಲ್ಲಿ ನಿಲ್ಲಿಸಿದ್ದ ಇನ್ನೋವಾ ಕಾರಿನಲ್ಲಿ ವ್ಯಕ್ತಿ ಇಬ್ಬರು ಯುವತಿಯೊಂದಿಗೆ ಸರಸ ಸಲ್ಲಾಪದಲ್ಲಿ ನಿರತವಾಗಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.
ಸಿಟಿ ಕೊಟ್ವಾಲಿ ಪ್ರದೇಶದ ವ್ಯಾಪ್ತಿಯಲ್ಲಿರುವ ಸಫೇದಾಬಾದ್‍ನಲ್ಲಿರುವ ಕಾಳಿಕಾ ಹವೇಲಿ ರೆಸ್ಟೋರೆಂಟ್ ನ ಪಾರ್ಕಿಂಗ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ.
ಈ ವಾಹನವು ರಾಯ್ಬರೇಲಿ ಜಿಲ್ಲೆಯಲ್ಲಿ ನೋಂದಣಿಯಾಗಿದೆ ಎಂದು ಪೊಲೀಸರು ಪತ್ತೆ ಹಚ್ಚಿದ್ದು, ಸಾರ್ವಜನಿಕ ಸ್ಥಳದಲ್ಲಿ ಇಂತಹ ವರ್ತನೆ ತೋರಿದ ಹಿನ್ನೆಲೆ ಅವರ ವಿರುದ್ಧ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮಕ್ಕೆ ಪೊಲೀಸರು ಮುಂದಾಗಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.