logo
WhatsApp Image 2026-04-02 at 14.46.04.jpeg
hindalco everlast.jpeg

ಮಣಿಪಾಲ ಶಾಂತಿನಗರದಲ್ಲಿ ಯುವಕ ಆತ್ಮಹತ್ಯೆ

ಟ್ರೆಂಡಿಂಗ್
share whatsappshare facebookshare telegram
10 Oct 2022
post image

ಉಡುಪಿ: ಕಳೆದ ಎರಡು ತಿಂಗಳಿಂದ ಮಣಿಪಾಲ ಶಾಂತಿನಗರದಲ್ಲಿ ವಾಸವಾಗಿದ್ದ ಬೆಂಗಳೂರು ಮೂಲದ ಯುವಕನೊರ್ವ ವಾಸದ ಮನೆಯ ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮೃತನನ್ನು 23ವರ್ಷದ ಸಮರ್ಥ್ ಎನ್. ಶಂಕರ್ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಸ್ವಷ್ಟ ಕಾರಣ ತಿಳಿದುಬಂದಿಲ್ಲ. ಬೆಂಗಳೂರಿನಿಂದ ಆಗಮಿಸಿರುವ ಸಂಬಂಧಿಕರ ಸಮಕ್ಷಮ ಪೋಲಿಸರು ಬಾಗಿಲು ತೆರವುಗೊಳಿಸಿದರು. ಠಾಣಾಧಿಕಾರಿ ರಾಜಶೇಖರ ಹೊಂದಾಳಿ, ಎಎಸ್ಐ ನಾಗೇಶ್ ನಾಯ್ಕ್, ನಿಧಿ ಕಾನೂನು ಪ್ರಕ್ರಿಯೆ ನಡೆಸಿದರು. ವೈದ್ಯಕೀಯ ಪರೀಕ್ಷೆಗೆ ಮೃತದೇಹ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಪೋಲಿಸರಿಗೆ ನೆರವಾದರು. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.