logo
WhatsApp Image 2026-04-02 at 14.46.04.jpeg
hindalco everlast.jpeg

ಬಲಿಂದ್ರ ಪೂಜೆಗೆ ಗದ್ದಗೆ ಹೋಗುವ ವೇಳೆ ಹಾವು ಕಚ್ಚಿ ಯುವಕ ಸಾವು

ಟ್ರೆಂಡಿಂಗ್
share whatsappshare facebookshare telegram
6 Nov 2021
post image

ಕಾಪು: ಬಲೀಂದ್ರ ಪೂಜೆಯ ಪ್ರಯುಕ್ತ ಗದ್ದೆಯಲ್ಲಿ ಪೂಜೆ ನಡೆಸಲು ಹೋಗಿದ್ದ ವೇಳೆ ಹಾವು ಕಚ್ಚಿ ಯುವಕ ಮೃತಪಟ್ಟ ಘಟನೆ ಕಾಪುವಿನಲ್ಲಿ ಶುಕ್ರವಾರ ನಡೆದಿದೆ.

ಮೃತನನ್ನು ಕಾಪು ಕಲ್ಯ ನಿವಾಸಿ ರೋಹಿತ್ ಕುಮಾರ್ (26) ಎಂದು ಗುರುತಿಸಲಾಗಿದೆ. ಗುರುವಾರ ರಾತ್ರಿ ರೋಹಿತ್ ಕುಮಾರ್ ಮತ್ತು ಸಹೋದರರು ಬಲೀಂದ್ರ ಪೂಜೆಗಾಗಿ ಗದ್ದೆಗೆ ತೆರಳಿದ್ದರು.

ಈ ಸಂದರ್ಭದಲ್ಲಿ ಅವರಿಗೆ ವಿಷ ಜಂತು ಕಚ್ಚಿದ್ದು, ಮನೆಯವರು ಕೂಡಲೇ ನಾಟಿ ವೈದ್ಯರ ಬಳಿಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದರು. ಇದರಿಂದ ಚೇತರಿಸಿಕೊಂಡಿದ್ದ ರೋಹಿತ್, ಶುಕ್ರವಾರ ಸಂಜೆ ತೀವ್ರ ಅಸ್ವಸ್ಥಗೊಂಡಿದ್ದನು.

ಹೀಗಾಗಿ ಕೂಡಲೇ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಆತ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.